ಪಣಜಿ: ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಪುಸಾದಲ್ಲಿ ಬೃಹತ್ ರ್‍ಯಾಲಿ ನಡೆಸಲಿದ್ದಾರೆ.
ಗೋವಾದಲ್ಲಿ ಚುನಾವಣಾ ಪ್ರಚಾರ ಮುಗಿಯುವ ಒಂದು ದಿನದ ಮುನ್ನ ಮೋದಿ ಅವರು ಸಂಜೆ 5 ಗಂಟೆಗೆ ಬೋಡ್ಗೇಶ್ವರ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಈಗಾಗಲೇ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್
Advertisement
Advertisement
ಸುಂದರವಾದ ದೀಪಾಲಂಕಾರ ಮತ್ತು ಬೃಹತ್ ಪೆಂಡಾಲ್ ಜನರಿಗೆ ಪ್ರಮುಖ ಆಕರ್ಷಣೆಯಾಗಲಿದೆ ಮತ್ತು ದೊಡ್ಡ ಸ್ವಾಗತ ಫಲಕಗಳನ್ನು ನಿರ್ಮಿಸಲಾಗಿದೆ. ಮೋದಿ ಅವರು ನಡೆಸಲಿರುವ ರ್‍ಯಾಲಿಯು ಸಾರ್ವಜನಿಕರ, ರಾಷ್ಟ್ರೀಯ ಮತ್ತು ರಾಜ್ಯ ಮಾಧ್ಯಮಗಳ ಗಮನ ಸೆಳೆಯಲಿದೆ. ಇದನ್ನೂ ಓದಿ: ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರ: ಯುಪಿ ಮತದಾರರಿಗೆ ಅಮಿತ್ ಶಾ ಕರೆ
Advertisement
ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಬದ್ಧವಾಗಿ ಪಕ್ಷವು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಬಿಜೆಪಿ ತಿಳಿಸಿದೆ. ಕೋವಿಡ್-19 ನಿಯಮಗಳ ಅನುಸಾರವಾಗಿ ಕ್ರಮ ಕೈಗೊಳ್ಳಲಾಗಿದ್ದು, ಕೋವಿಡ್-19 ಪ್ರೋಟೋಕಾಲ್‍ಗಳನ್ನು ಅನುಸರಿಸಲು ನಾವು ಪ್ರತಿಯೊಬ್ಬರನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಲಾಗಿದೆ. ಗೋವಾ ವಿಧಾನಸಭಾ ಚುನಾವಣೆ ಫೆಬ್ರವರಿ 14 ರಂದು ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.