ನವದೆಹಲಿ: ಮಾ.11 ಮತ್ತು ಮಾ.12ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾರಿಷಸ್ (Mauritius) ಪ್ರವಾಸ ಕೈಗೊಳ್ಳಲಿದ್ದಾರೆ.
#WATCH | In the National Assembly, Prime Minister of Mauritius, Dr Navinchandra Ramgoolam says “In the context of the celebrations of the 57th anniversary of the Independence of our country, I have great pleasure to inform the House that following my invitation, Prime Minister… pic.twitter.com/qtxZIQOV5z
— ANI (@ANI) February 22, 2025
ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯಲ್ಲಿ (Mauritius National Day) ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ (Navin Ramgoolam) ತಿಳಿಸಿದ್ದಾರೆ. ಇದನ್ನೂ ಓದಿ: ಎಫ್‌ಬಿಐ ನಿರ್ದೇಶಕನಾದ ಭಾರತೀಯ – ಭಗವದ್ಗೀತೆ ಮೇಲೆ ಕೈಯಿಟ್ಟು ಪ್ರಮಾಣ ಸ್ವೀಕರಿಸಿದ ಕಾಶ್ ಪಟೇಲ್
ಶುಕ್ರವಾರ ಸದನವನ್ನುದ್ದೇಶಿಸಿ ಮಾತನಾಡಿದ ನವೀನ್ ರಾಮ್‌ಗೂಲಂ, ನಮ್ಮ ದೇಶದ ಸ್ವಾತಂತ್ರ್ಯದ 57ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ, ಸದನಕ್ಕೆ ಒಂದು ವಿಷಯ ತಿಳಿಸಲು ನನಗೆ ತುಂಬಾ ಸಂತೋಷವಾಗಿದೆ. ನಮ್ಮ ಆಹ್ವಾನದ ಮೇರೆಗೆ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಳ್ಳಲು ಭಾರತದ ಪ್ರಧಾನಿ ಮೋದಿ ಅವರು ಒಪ್ಪಿದ್ದಾರೆ. ಇದು ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯಕ್ಕೆ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮೋದಿ ಅವರ ಇತ್ತೀಚಿನ ಪ್ಯಾರಿಸ್, ಅಮೆರಿಕ ಭೇಟಿಯನ್ನು ಪ್ರಸ್ತಾಪಿಸಿದರು. ಒತ್ತಡದ ನಡುವೆಯು ಅವರು ಕಾರ್ಯಕ್ರಮಕ್ಕೆ ಬರಲು ಒಪ್ಪಿದ್ದಾರೆ. ಇಂತಹ ಪ್ರತಿಷ್ಟಿತ ವ್ಯಕ್ತಿಗೆ ಅತಿಥ್ಯ ವಹಿಸುವುದು ನಿಜಕ್ಕೂ ನಮ್ಮ ದೇಶದ ಹೆಮ್ಮೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಮುರಿದ ಸೀಟ್ ನೀಡಿ ಮೋಸ ಮಾಡಿದ್ದೀರಿ: ಏರ್ ಇಂಡಿಯಾ ವಿರುದ್ಧ ಶಿವರಾಜ್ ಸಿಂಗ್ ಚೌಹಾಣ್ ಕೆಂಡಾಮಂಡಲ
ಮಾರಿಷತ್ ಪ್ರತಿ ವರ್ಷ ಮಾರ್ಚ್ 12ರಂದು ರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡುತ್ತದೆ. ಈ ದಿನವು 1968ರಲ್ಲಿ ಬ್ರಿಟಿಷ್ ಅಳ್ವಿಕೆಯಿಂದ ಮುಕ್ತವಾಗಿ ಸ್ವಾತಂತ್ರ್ಯ ಪಡೆದ ಸೂಚಕವಾಗಿದೆ. ಕಾರ್ಯಕ್ರಮದ ಬಳಿಕ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವ ಸಾಧ್ಯತೆಗಳೂ ಇವೆ ಎನ್ನಲಾಗಿದೆ. ಇದನ್ನೂ ಓದಿ: ಬಸ್, ಮೆಟ್ರೋ ದರ ಏರಿಕೆ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆ ಏರಿಕೆ! – ತೆಂಗಿನ ಎಣ್ಣೆ ದರ ದಿಢೀರ್ ಏರಿಕೆಯಾಗಿದ್ದು ಯಾಕೆ?