70,000 ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

Public TV
1 Min Read
narendra modi

ನವದೆಹಲಿ: ರೋಜಗಾರ್ ಮೇಳದ (Rozgar Mela) ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) 70,000 ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ರೈಲ್ವೆ, ಅಂಚೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಭರ್ತಿಯಾದ ನೌಕರರಿಗೆ ನೇಮಕಾತಿ ಪತ್ರ ನೀಡಿದರು.

ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಅಜಾದಿ ಕಾ ಅಮೃತ್ ಕಾಲ ಪ್ರಾರಂಭವಾಗಿರುವ ಹಿನ್ನಲೆ ಈ ಅವಧಿಯಲ್ಲಿ ಸರ್ಕಾರಿ ಸೇವೆಗಳಿಗೆ ಸೇರ್ಪಡೆಯಾಗುವವರು ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿ ಹೊಂದಿರುತ್ತಾರೆ. ರೋಜಗಾರ್ ಮೇಳ ಎನ್‌ಡಿಎ – ಬಿಜೆಪಿ ಸರ್ಕಾರದ ಹೊಸ ಗುರುತು ಎಂದರು. ಇದನ್ನೂ ಓದಿ: ಟ್ವಿಟ್ಟರ್‌ ಕಾನೂನು ಪಾಲನೆ ಮಾಡದೇ ನಿರಂತರ ಉಲ್ಲಂಘನೆ ಮಾಡುತ್ತಿತ್ತು: ರಾಜೀವ್‌ ಚಂದ್ರಶೇಖರ್‌

ಈ ವೇಳೆ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ರಾಜಕೀಯ ಭ್ರಷ್ಟಾಚಾರ, ಯೋಜನೆಗಳಲ್ಲಿನ ಅವ್ಯವಹಾರಗಳು, ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ಅವರ ಗುರುತು ಎಂದು ವಾಗ್ದಾಳಿ ನಡೆಸಿದರು.

ಹಿಂದೆ ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರವನ್ನು ರಾಜವಂಶದ ಪಕ್ಷ ಉತ್ತೇಜಿಸಿತ್ತು. ಕೆಲವು ಪಕ್ಷಗಳು ವಿವಿಧ ಹುದ್ದೆಗಳಿಗೆ ತಮ್ಮದೇ ಆದ ದರ ಕಾರ್ಡ್ ನಿಗದಿಪಡಿಸಿತ್ತು. ಈ ಮೂಲಕ ಯುವಕರನ್ನು ಲೂಟಿ ಮಾಡಲಾಗುತ್ತಿತ್ತು. ಯುವಕರ ಉಜ್ವಲ ಭವಿಷ್ಯವನ್ನು ಕಾಪಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ – ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ ಆಯ್ಕೆ ನೆನೆಗುದಿಗೆ

ದೇಶದಲ್ಲಿ ಉದ್ಯೋಗಾವಕಾಶಗಳ ಕುರಿತು ಮಾತನಾಡಿ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಹೊಸ ಉದ್ಯೋಗಾವಕಾಶಗಳು ಬರುತ್ತಿವೆ. ‘ಸ್ಟಾರ್ಟ್ಅಪ್ ಇಂಡಿಯಾ’ ಮತ್ತು ‘ಸ್ಟ್ಯಾಂಡ್-ಅಪ್ ಇಂಡಿಯಾ’ ಯೋಜನೆಗಳು ಭಾರತದ ಯುವಜನರ ಸಾಮರ್ಥ್ಯವನ್ನು ಹೆಚ್ಚಿಸಿವೆ. ಒಂದು ದಶಕದ ಹಿಂದೆಗೆ ಹೋಲಿಸಿದರೆ ಈಗ ಭಾರತ ಹೆಚ್ಚು ಸ್ಥಿರ, ಸುರಕ್ಷಿತ ಮತ್ತು ಬಲಿಷ್ಠ ದೇಶವಾಗಿದೆ. ನಿರ್ಣಾಯಕತೆಯು ಭಾರತ ಸರ್ಕಾರದ ಗುರುತಾಗಿದೆ ಎಂದು ಪ್ರತಿಪಾದಿಸಿದರು.

Share This Article