ನವದೆಹಲಿ: ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ (Pahalgam Terrorist Attack) ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಬುಧವಾರ (ಏ.30) ಮಹತ್ವದ ಸರಣಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ರಾಷ್ಟ್ರೀಯ ಭದ್ರತೆಯ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತಾ ಸಂಪುಟ ಸಮಿತಿ (CCS) ಸಭೆ ನಡೆಸಲಿದೆ. ಇದಾದ ಬಳಿಕ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ (CCPA), ನಂತರ ಕೇಂದ್ರ ಸಂಪುಟ ಸಮಿತಿ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದೆ. ಇದನ್ನೂ ಓದಿ: 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಭಾರತ ವಾರ್ನಿಂಗ್ – ಪಾಕ್ ಸಂಬಂಧಕ್ಕೆ ಎಳ್ಳುನೀರು
ಪಹಲ್ಗಾಮ್ ದಾಳಿಯ ನಂತರ ನಡೆಯುತ್ತಿರುವ ಅತ್ಯುನ್ನತ ಮಟ್ಟದ 2ನೇ ಸುತ್ತಿನ ಸಭೆ ಇದಾಗಿದ್ದು, ಭದ್ರತೆ ಸಿದ್ಧತೆಗಳ ಕುರಿತು ಚರ್ಚೆ ನಡೆಯಲಿದೆ. ಜೊತೆಗೆ ಪಾಕಿಸ್ತಾನದ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ
ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೇ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಆರೋಗ್ಯ ಸಚಿವ ಜೆ.ಪಿ ನಡ್ಡಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರ ಹಿರಿಯ ಸಚಿವರೂ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಆರ್ಥಿಕ ವ್ಯವಹಾರಗಳ ಸಮಿತಿ ಸಭೆ ನಡೆಸಲಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್ – ಉಗ್ರರ ಸಂಭಾವ್ಯ ದಾಳಿಯ ಎಚ್ಚರಿಕೆ ಕೊಟ್ಟ ಗುಪ್ತಚರ
ಏ.23ರಂದು ಪ್ರಧಾನಿ ಮೋದಿ ನೇತೃತ್ವದಲ್ಲೇ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್ (Attari Border) ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧೂ ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಮಿತಿ ತೆಗೆದುಕೊಂಡಿತ್ತು. ಈ ಮೂಲಕ ಪಾಕಿಸ್ತಾನ ಜೊತೆಗಿನ ರಾಜತಾಂತ್ರಿಕ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿತ್ತು. ಇದನ್ನೂ ಓದಿ: Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?