ನವದೆಹಲಿ: ಏಪ್ರಿಲ್ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೂರನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಕೊರೊನಾ ವೈರಸ್ ಸೋಂಕು ಹರಡುವಿಕೆ ಹಾಗೂ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮೋದಿ ಅವರು ಚರ್ಚೆ ಮಾಡಲಿದ್ದಾರೆ. ಈ ಹಿಂದೆ ಲಾಕ್‍ಡೌನ್ ಹಾಗೂ ಕೊರೊನಾ ವೈರಸ್ ಹರಡುವಿಕೆ ತಡೆಯ ವಿಚಾರವಾಗಿ ಎರಡು ಬಾರಿ ಮೋದಿ ಅವರು ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಮೊದಲ ಬಾರಿಗೆ ಮಾರ್ಚ್ 20ರಂದು ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ, ಎಲ್ಲರ ಅಭಿಪ್ರಾಯ, ಸಲಹೆಗಳನ್ನು ಪಡೆದು ಮಾರ್ಚ್ 24ರಂದು ದೇಶಾದ್ಯಂತ ಲಾಕ್‍ಡೌನ್ ಜಾರಿಗೆ ತರಲಾಯ್ತು.
Advertisement
Prime Minister Narendra Modi will interact with CMs of all States via video conference on 27th April pic.twitter.com/k57HGUtosA
— ANI (@ANI) April 22, 2020
Advertisement
ಮಾಚ್ 24ರ ಬಳಿಕ 21 ದಿನಗಳ ಲಾಕ್‍ಡೌನ್ ಮುಕ್ತಾಯವಾಗುವುದಕ್ಕೂ ಮುನ್ನವೇ ಎರಡನೇ ವಿಡಿಯೋ ಕಾನ್ಫರೆನ್ಸ್ ಅನ್ನು ಏಪ್ರಿಲ್ 11ರಂದು ನಡೆಸಿ, ಏಪ್ರಿಲ್ 14ಕ್ಕೆ ಮುಗಿಯಬೇಕಿದ್ದ ಲಾಕ್‍ಡೌನ್ ಅನ್ನು ಮೇ 3ರವರೆಗೆ ವಿಸ್ತರಣೆ ಮಾಡಲಾಯಿತು.
Advertisement
ಸದ್ಯ ಏಪ್ರಿಲ್ 20ರ ಬಳಿಕ ಕೇಂದ್ರದ ನಿರ್ದೇಶನದ ಪ್ರಕಾರವೇ ಕೆಲವು ರಾಜ್ಯಗಳು ಲಾಕ್‍ಡೌನ್ ನಿಯಮಗಳನ್ನು ಸಡಿಲಗೊಳಿಸಿವೆ. ಹೀಗಾಗಿ ಈ ಬಗ್ಗೆ ಚರ್ಚೆ, ಮಾಹಿತಿ ಪಡೆಯಲು ಏಪ್ರಿಲ್ 27ರಂದು ಮೋದಿ ಅವರು ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
Advertisement
1486 new cases in the last 24 hours and 49 deaths: Ministry of Health and Family Welfare https://t.co/TCC16aPcj2
— ANI (@ANI) April 22, 2020
ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 1,486 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 49 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಈವರೆಗೆ ಭಾರತದಲ್ಲಿ 20,471 ಮಂದಿಗೆ ಸೋಂಕು ತಗುಲಿದ್ದು, 3,960 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 652 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.