ನವದೆಹಲಿ: ಲೋಕಸಭಾ ಚುನಾವಣಾ (Lok Sabha Election) ಪ್ರಚಾರ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಎರಡು ದಿನ ಧ್ಯಾನ (Meditation) ಮಾಡಲಿದ್ದಾರೆ.
ಸ್ವಾಮಿ ವಿವೇಕಾನಂದರು (Swami Vivekanand) ಧ್ಯಾನ ಮಾಡಿದ್ದ ಕನ್ಯಾಕುಮಾರಿಯ ಧ್ಯಾನ ಮಂದಿರದಲ್ಲಿ ಮೋದಿ ಮೇ 30ರ ಸಂಜೆಯಿಂದ ಜೂನ್ 1ರ ಸಂಜೆವರೆಗೆ ಧ್ಯಾನ ಮಾಡಲಿದ್ದಾರೆ.
Advertisement
Advertisement
ತಿರುನಲ್ವೇಲಿ ಡಿಐಜಿಗೆ ಭದ್ರತೆಯ ಉಸ್ತುವಾರಿ ನೀಡಲಾಗಿದ್ದು ಈಗಾಗಲೇ ಸ್ಥಳದಲ್ಲಿ ಮೋದಿಗೆ ಭದ್ರತೆ ನೀಡುವ ಎಸ್‌ಪಿಜಿ ತಂಡ ಬಿಡುಬಿಟ್ಟಿದೆ. ಈ ಸ್ಥಳದ ಭದ್ರತೆಗೆ 2000 ಪೊಲೀಸರನ್ನು ನಿಯೋಜಿಸಲಾಗುತ್ತದೆ.
Advertisement
ಜೂನ್ 30ರ ಸಂಜೆ 4.45ಕ್ಕೆ ಪ್ರಧಾನಿ ಮೋದಿ ಧ್ಯಾನ ಕೇಂದ್ರಕ್ಕೆ ಆಗಮಿಸಲಿದ್ದಾರೆ. 2019ರಲ್ಲಿ ಲೋಕಸಭಾ ಚುನಾವಣೆ ಮುಗಿದ ಬಳಿಕ ಮೋದಿ ಕೇದಾರನಾಥದಲ್ಲಿ ಧ್ಯಾನ ಮಾಡಿದ್ದರು. ಇದನ್ನೂ ಓದಿ: ಹಣ ಕದಿಯುವುದರಲ್ಲಿ ಯಾರ ಪಾಲು ಇದೆಯೋ ಅವರು ಸಿಕ್ಕಿಬೀಳುತ್ತಾರೆ: ವಿಪಕ್ಷಗಳಿಗೆ ಮೋದಿ ಟಾಂಗ್
Advertisement
1892ರ ಡಿಸೆಂಬರ್ 23, 24, 25 ಸ್ವಾಮಿ ವಿವೇಕಾನಂದರು ಇದೇ ಜಾಗದಲ್ಲಿ ಧ್ಯಾನಕ್ಕೆ ಕೂತಿದ್ದರು. ಈ ಕಾರಣಕ್ಕೆ 1970ರಲ್ಲಿ ಇದೇ ಜಾಗದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿತ್ತು.