LatestMain PostNational

ಇಂದು ಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾಗಲಿರುವ ಮೋದಿ

Advertisements

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಲಿದ್ದಾರೆ.

ನಾಲ್ಕು ದಿನಗಳ ಕಾಲ ಭಾರತದ ಪ್ರವಾಸ ಕೈಗೊಂಡಿರುವ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಸೋಮವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ಇಂದು ಉಭಯ ನಾಯಕರು ವಿವಿಧ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಿದ್ದು, ನಂತರ ಉಭಯ ದೇಶಗಳು ಹಲವಾರು ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. ಇದನ್ನೂ ಓದಿ: ಝವಾಹಿರಿಗೆ ಆಶ್ರಯ ನೀಡುವ ಮೂಲಕ ತಾಲಿಬಾನ್ ದೋಹಾ ಒಪ್ಪಂದ ಉಲ್ಲಂಘಿಸಿದೆ: ಆಂಟನಿ ಬ್ಲಿಂಕೆನ್

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟವು ಭಾರತ ಮತ್ತು ಮಾಲ್ಡೀವ್ಸ್ ನಡುವಿನ ನ್ಯಾಯಾಂಗ ಸಹಕಾರಕ್ಕಾಗಿ ಒಪ್ಪಂದ ಮಾಡಿಕೊಳ್ಳಲು ಈ ಭೇಟಿಯನ್ನು ಆಯೋಜಿಸಲಾಗಿದೆ. ಈ ಒಪ್ಪಂದವು ನ್ಯಾಯಾಲಯದ ಡಿಜಿಟಲೀಕರಣಕ್ಕಾಗಿ ಮಾಹಿತಿ ತಂತ್ರಜ್ಞಾನದ (ಐಟಿ) ಪ್ರಯೋಜನಗಳನ್ನು ಪಡೆಯಲು ವೇದಿಕೆ ಒದಗಿಸಲು ಸಹಕಾರಿಯಾಗಲಿದೆ. ಎರಡೂ ದೇಶಗಳಲ್ಲಿಯೂ ಕೂಡ ಐಟಿ ಕಂಪನಿಗಳು ಮತ್ತು ಸ್ಟಾರ್ಟ್-ಅಪ್‍ಗಳಿಗೆ ಸಂಭಾವ್ಯ ಬೆಳವಣಿಗೆಯಾಗಿದೆ.

ಸೋಲಿಹ್ ಅವರು ಸೋಮವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯ ನಂತರ, ಜೈಶಂಕರ್ ಅವರು ಇದು ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಮೊದಲ ಯೋಜನೆಯಾಗಿದ್ದು, ಇದನ್ನು ವಿಶೇಷ ಸಹಭಾಗಿತ್ವದಲ್ಲಿ (ಹೆಚ್ಚುವರಿ ಜವಾಬ್ದಾರಿ) ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Live Tv

Leave a Reply

Your email address will not be published.

Back to top button