ವಾಷಿಂಗ್ಟನ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದಿನಿಂದ ನಾಲ್ಕುದಿನಗಳ ಕಾಲ ಅಮೆರಿಕ ಪ್ರವಾಸ ಮಾಡಲಿದ್ದು, ಸೆಪ್ಟೆಂಬರ್ 24ರಂದು ನಡೆಯಲಿರುವ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.
Advertisement
ಇಂದು ಮಧ್ಯಾಹ್ನ ನರೇಂದ್ರ ಮೋದಿ ಅಮೆರಿಕಕ್ಕೆ ತೆರಳಲಿದ್ದು, ಕೊರೊನಾ ಬಳಿಕ ಪ್ರಧಾನಿ ಮೋದಿ ಮೊದಲ ವಿದೇಶಿ ಪ್ರವಾಸ ಇದಾಗಿದೆ. ಇಂದು ದೆಹಲಿಯಿಂದ ವಾಷಿಂಗ್ಟನ್ ಡಿಸಿಗೆ ಪ್ರಯಾಣ ಮಾಡಲಿರುವ ಮೋದಿ ನಾಳೆ ಅಮೆರಿಕಾದ ಉನ್ನತ ಸಂಸ್ಥೆಗಳ ಸಿಇಓಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಪ್ರಮುಖವಾಗಿ ಆ್ಯಪಲ್ ಸಂಸ್ಥೆ ಮುಖ್ಯಸ್ಥರಾದ ಟಿಮ್ ಕುಕ್ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: ಫ್ರಾನ್ಸ್ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ
Advertisement
Advertisement
ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಜೋ ಬೈಡನ್, ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದು, ಇದರಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೋದಿ ಜೊತೆ ಕ್ವಾಡ್ ಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮೋರಿಸನ್, ಜಪಾನ್ ಪ್ರಧಾನ ಮಂತ್ರಿ ಯೊಶಿಹಿಡೆ ಸುಗ ಮತ್ತು ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಭಾಗಿಯಾಗಲಿದ್ದಾರೆ.
Advertisement
ದ್ವಿಪಕ್ಷೀಯ ಸಭೆ:
ನರೇಂದ್ರ ಮೋದಿ ಮತ್ತು ಜೋ ಬೈಡನ್ ದ್ವಿಪಕ್ಷೀಯ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ವೃದ್ಧಿಯ ಕುರಿತು ಚರ್ಚೆನಡೆಸಲಿದ್ದಾರೆ. ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಮತ್ತು ಭದ್ರತಾ ಸಹಯೋಗ ಮತ್ತು ಶುದ್ಧ ಇಂಧನ ಪಾಲುದಾರಿಕೆಯನ್ನು ಹೆಚ್ಚಿಸುವ ಬಗ್ಗೆ ಪ್ರಮುಖವಾಗಿ ಚರ್ಚಿಸುವ ನಿರೀಕ್ಷೆ ಇದೆ. ಆ ಬಳಿಕ ಮೋದಿಯವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗೂ ಸಭೆ ನಡೆಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: 5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು
ಸೆಪ್ಟೆಂಬರ್ 24ರಂದು ಸಂಜೆ ವಾಷಿಂಗ್ಟನ್ ಡಿಸಿಯಿಂದ ನರೇಂದ್ರ ಮೋದಿ ನ್ಯೂಯಾರ್ಕ್ ಪ್ರಯಾಣ ಮಾಡಲಿದ್ದು, ಸೆಪ್ಟೆಂಬರ್ 25ರಂದು ನ್ಯೂಯಾರ್ಕ್‍ನಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಮೋದಿ ಭಾಷಣ ಮಾಡಲಿದ್ದಾರೆ. ಇದಾದ ಬಳಿಕ ಸೆಪ್ಟೆಂಬರ್ 26ಕ್ಕೆ ನ್ಯೂಯಾರ್ಕ್‍ನಿಂದ ನವದೆಹಲಿಗೆ ವಾಪಸ್ ಆಗಲಿದ್ದಾರೆ.