ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ (PM-KISAN) ಯೋಜನೆ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 10 ಕೋಟಿ ರೈತರಿಗೆ 21 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.
Advertisement
11ನೇ ಹಣಕಾಸು ಆಯೋಗದಲ್ಲಿ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿಂದು ಅನುದಾನ ಬಿಡುಗಡೆ ಮಾಡಿದ್ದಾರೆ. NDA ನೇತೃತ್ವದ BJP ಸರ್ಕಾರಕ್ಕೆ ಎಂಟು ವರ್ಷ ಪೂರ್ಣವಾಗಿರುವ ಹಿನ್ನಲೆ ಇಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಗರೀಬ್ ಕಲ್ಯಾಣ ಹೆಸರಿನಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: ರೈತರು ವಿದ್ಯುತ್ ಬಿಲ್ ಪಾವತಿಸುವ ಅಗತ್ಯವಿಲ್ಲ: ಅಮಿತ್ ಶಾ ಭರವಸೆ
Advertisement
Advertisement
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ 9 ಇಲಾಖೆಗಳ ಯೋಜನೆಗಳ ಬಗ್ಗೆ ವಿವಿಧ ರಾಜ್ಯದ ಫಲಾನುಭವಿಗಳೊಂದಿಗೆ ಮೋದಿ ಸಂವಾದ ನಡೆಸಿದರು. ಇದೇ ವೇಳೆ ದೇಶಾದ್ಯಂತ ಸಾರ್ವಜನಿಕ ಪ್ರತಿನಿಧಿಗಳಿಂದ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಪ್ರತಿಕ್ರಿಯೆ ಪಡೆದರು.