ನವದೆಹಲಿ: ನನ್ನ ಸ್ನೇಹಿತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ ಎಂದು ಪ್ರಧಾನಿ ಮೋದಿ ಖುಷಿ ವ್ಯಕ್ತಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಇಂದು ಸಂಜೆ ಮತ್ತು ನಾಳೆ ನಮ್ಮ ಸಂವಾದಗಳನ್ನು ಎದುರು ನೋಡುತ್ತಿದ್ದೇನೆ. ಭಾರತ-ರಷ್ಯಾ ಸ್ನೇಹವು ಕಾಲಾತೀತವಾಗಿದ್ದು, ಇದು ನಮ್ಮ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡಿದೆ ಎಂದು ತಿಳಿಸಿದ್ದಾರೆ.
Delighted to welcome my friend, President Putin to India. Looking forward to our interactions later this evening and tomorrow. India-Russia friendship is a time tested one that has greatly benefitted our people.@KremlinRussia_E pic.twitter.com/L7IORzRfV9
— Narendra Modi (@narendramodi) December 4, 2025
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದರು.
ರಷ್ಯಾ ಅಧ್ಯಕ್ಷ ಪುಟಿನ್ ಎರಡು ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಡಿ.5 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು ನಡೆಸಲಿದ್ದಾರೆ.

