LatestLeading NewsMain PostNational

ಹೊಸ ಸಂಸತ್ ಭವನದಲ್ಲಿ 9,500 ಕೆಜಿ ಕಂಚಿನ ರಾಷ್ಟ್ರೀಯ ಲಾಂಛನ ಅನಾವರಣ – ಏನಿದರ ವಿಶೇಷ?

ನವದೆಹಲಿ: ಹೊಸ ಸಂಸತ್ ಭವನವಾದ ಸೆಂಟ್ರಲ್ ಮೇಲ್ಛಾವಣಿಯಲ್ಲಿ ಕಂಚಿನಿಂದ ನಿರ್ಮಿಸಲಾದ 9,500 ಕೆ.ಜಿ ತೂಕದ ಅಶೋಕ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಿದರು.

ಏನಿದರ ವಿಶೇಷ?
6.5 ಮೀಟರ್ ಎತ್ತರವಿರುವ ಈ ಲಾಂಛನವು 9,500 ಕೆ.ಜಿ.ತೂಕವಿದೆ. ಸಂಪೂರ್ಣ ಕಂಚಿನಿಂದ ತಯಾರಿಸಲ್ಪಟ್ಟಿದ್ದು, ಹೊಸ ಸಂಸತ್ ಕಟ್ಟಡದ ಮೇಲ್ಭಾಗದಲ್ಲಿ ನಿರ್ಮಿಸಲಾಗಿದೆ. ಲಾಂಚನಕ್ಕೆ ಸಹಕಾರಿಯಾಗಿ ನಿಲ್ಲುವಂತೆ 6,500 ಕೆಜಿ ತೂಕದ ಉಕ್ಕಿನ ಪೋಷಕ ರಚನೆಯನ್ನು ನಿರ್ಮಿಸಲಾಗಿದೆ. ಎಂಟು ವಿಭಿನ ಹಂತಗಳಲ್ಲಿ ತಯಾರಿಕಾ ಕಾರ್ಯ ನಡೆದಿದ್ದು, ರಾಷ್ಟ್ರೀಯ ಲಾಂಛನದ ಸ್ಕೆಚ್ ಮತ್ತು ಎರಕಹೊಯ್ದ ಪ್ರಕ್ರಿಯೆಯು ಕ್ಲೇ ಮಾಡೆಲಿಂಗ್/ಕಂಪ್ಯೂಟರ್ ಗ್ರಾಫಿಕ್‌ನಿಂದ ಕಂಚಿನ ವರೆಗೆ ಸಾಗಿದೆ. ಇದನ್ನೂ ಓದಿ: ಮದ್ಯದ ದೊರೆ ವಿಜಯ್‌ ಮಲ್ಯಗೆ 4 ತಿಂಗಳು ಜೈಲು: ಸುಪ್ರೀಂ ಕೋರ್ಟ್ ತೀರ್ಪು

ಹೊಸ ಸಂಸತ್ ಭವನದ ಕೆಲಸವನ್ನು ಟಾಟಾ ಪ್ರಾಜೆಕ್ಟ್ಸ್‌ ಲಿಮಿಟೆಡ್‌ಗೆ ವಹಿಸಲಾಗಿದೆ. 60,000 ಚ.ಮೀ. ವಿಸ್ತೀರ್ಣದಲ್ಲಿ ನೂತನ ಸಂಸತ್ ಭವನ ನಿರ್ಮಾಣವಾಗುತ್ತಿದೆ. ಮಾಸ್ಟರ್ ಪ್ಲಾನ್ ಪ್ರಕಾರ, ಈಗಿರುವ ವೃತ್ತಾಕಾರದ ಸಂಸತ್ ಭವನದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆಯ ಹಿಂದೆ ಈ ಹೊಸ ತ್ರಿಕೋನ ಸಂಸತ್ ಭವನವನ್ನು ನಿರ್ಮಿಸಲಾಗುತ್ತಿದೆ. ಸಂಸತ್ತಿನ ಕಲಾಪದಲ್ಲಿ ಇದು 888 ಲೋಕಸಭಾ ಸದಸ್ಯರು, 384 ರಾಜ್ಯಸಭಾ ಸದಸ್ಯರ ಆಸನ ಸಾಮರ್ಥ್ಯವನ್ನು ಹೊಂದಿರಲಿದೆ. ಲೋಕಸಭೆಯ ಸಭಾಂಗಣದಲ್ಲಿ 1,272 ಆಸನಗಳನ್ನು ಸಿದ್ಧಪಡಿಸಲಾಗಿದೆ. ಇದರಿಂದ ಉಭಯ ಸದನಗಳ ಜಂಟಿ ಅಧಿವೇಶನವೂ ಸಾಧ್ಯವಾಗಲಿದೆ. ಇದನ್ನೂ ಓದಿ: ಗೋವಾದಲ್ಲೂ ಆಪರೇಷನ್ ಕಮಲ ಸದ್ದು – ಇಬ್ಬರು ಕಾಂಗ್ರೆಸ್ ಶಾಸಕರ ಅನರ್ಹತೆ ಕೋರಿ ಸ್ಪೀಕರ್‌ಗೆ ಮನವಿ

ಹೊಸ ಸಂಸತ್ ಕಟ್ಟಡದ ಯೋಜನೆಯನ್ನು ಸೆಪ್ಟೆಂಬರ್ ತಿಂಗಳಲ್ಲಿ 2019 ರಲ್ಲಿ ಘೋಷಿಸಲಾಯಿತು. 2020ರ ಡಿಸೆಂಬರ್ 10ರಂದು ಪ್ರಧಾನಿ ನರೇಂದ್ರ ಮೋದಿಯವರು ಯೋಜನೆಯ ಅಡಿಗಲ್ಲು ಹಾಕಿದರು.

Live Tv

Leave a Reply

Your email address will not be published.

Back to top button