ನವದೆಹಲಿ: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ 21 ದಿನದ ಲಾಕ್‍ಡೌನ್ ಕೂಡ ಮುಗಿಯುತ್ತಿದೆ. ಹೀಗಾಗಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಭೆ ಮಾಡುತ್ತಿದ್ದಾರೆ.
ಪ್ರಧಾನಿ ಮೋದಿ ಅವರು ಬೆಳಗ್ಗೆ 11 ಗಂಟೆಯಿಂದ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನು ಶುರು ಮಾಡಿದ್ದಾರೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಸಭೆ ನಡೆಸುತ್ತಿದ್ದಾರೆ. ಈ ಮೂಲಕ ಮೋದಿ ಅವರು ಕೊರೊನಾ ಹರಡದಂತೆ ಮಾಸ್ಕ್ ಧರಿಸಬೇಕು ಎಂಬುದನ್ನು ಸಾರ್ವಜನಿಕರಿಗೆ ತಿಳಿಸುತ್ತಿದ್ದಾರೆ.
Advertisement
Advertisement
ಪ್ರತಿಯೊಬ್ಬ ಮುಖ್ಯಮಂತ್ರಿಯ ಜೊತೆ ಕೊರೊನಾ ಬಗ್ಗೆ ಐದು ನಿಮಿಷ ಪ್ರತ್ಯೇಕವಾಗಿ ಚರ್ಚೆ ಮಾಡುತ್ತಿದ್ದಾರೆ. ಇಂದಿನ ಸಭೆಯ ಬಳಿಕ ಲಾಕ್‍ಡೌನ್ ವಿಸ್ತರಣೆ ಅಧಿಕೃತ ಘೋಷಣೆ ಆಗಬಹದು ಎನ್ನಲಾಗುತ್ತಿದೆ. ಈಗಾಗಲೇ ಒಡಿಶಾ ಮತ್ತು ಪಂಜಾಬ್ ರಾಜ್ಯದ ಸಿಎಂಗಳು ಎಪ್ರಿಲ್ ಅಂತ್ಯದವರೆಗೂ ಲಾಕ್‍ಡೌನ್ ವಿಸ್ತರಿಸಿ ಆದೇಶ ಹೊರಡಿಸಿದೆ.
Advertisement
ಕರ್ನಾಟಕವೂ ಸೇರಿ ಹಲವು ರಾಜ್ಯಗಳು ಲಾಕ್‍ಡೌನ್ ತೆರವು ಮಾಡಬೇಕಾ ಮುಂದುವರಿಸಬೇಕಾ ಅನ್ನೊ ಗೊಂದಲದಲ್ಲಿವೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸಿಎಂಗಳ ಸಭೆ ಬಳಿಕ ಏನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನುವುದು ಕುತೂಹಲ.