ನವದೆಹಲಿ: 76ನೇ ಗಣರಾಜ್ಯೋತ್ಸವ (Republic Day 2025) ಸಂಭ್ರಮದ ವೇಳೆ ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿಯವರ ಪೇಟ (Modi Turban) ಗಮನಸೆಳೆದಿದೆ.
ವಾಸ್ತವವಾಗಿ ಪ್ರಧಾನಿಯವರು (PM Modi) ದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿದಾಗ ಅಲ್ಲಿನ ಸಂಸ್ಕೃತಿಗೆ ತಕ್ಕಂತೆ ಉಡುಗೆ-ತೊಡುಗೆ ಧರಿಸುವ ಮೂಲಕ ಗಮನ ಸೆಳೆಯುವ ಹಾಗೂ ಅಲ್ಲಿನ ಸಂಸ್ಕೃತಿಗೆ ಗೌರವ ಕೊಡುವ ಕೆಲಸ ಮಾಡುತ್ತಾರೆ. ಇದನ್ನೂ ಓದಿ: ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ: ಪರಮೇಶ್ವರ್
- Advertisement -
- Advertisement -
ಭಾರತದ ವೈವಿಧ್ಯತೆಯನ್ನು ಸಂಕೇತಿಸುವ ಹಳದಿ ಮತ್ತು ಕೆಂಪು ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಈ ಬಾರಿ ಧರಿಸಿದ್ದರು. ಜೊತೆಗೆ ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್, ಬಂದಗಾಲ ಪೈಜಾಮಾ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದರು.
- Advertisement -
ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು.
- Advertisement -
ಸ್ವಾತಂತ್ರ್ಯ ದಿನ ಮತ್ತು ಗಣರಾಜ್ಯೋತ್ಸವದ 2 ಸಂದರ್ಭಗಳಲ್ಲಿ ಪ್ರಧಾನಿಯವರ ಉಡುಗೆಯ ಆಯ್ಕೆಯು ಹೆಚ್ಚಿನ ಗಮನವನ್ನು ಸೆಳೆಯುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಪ್ರಧಾನಿಯವರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸುತ್ತಾರೆ. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವ – ಕರ್ತವ್ಯ ಪಥದಲ್ಲಿ ಆಕರ್ಷಕ ಪಥಸಂಚಲನ, ಸೇನಾ ಶಕ್ತಿ ಪ್ರದರ್ಶನ