ನವದೆಹಲಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆದೇಶಿಸಲಾದ ಲಾಕ್ ಡೌನ್ ಮಂಗಳವಾರ ಮುಗಿಯಲಿದ್ದು, ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.
ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಬರೆಯಲಾಗಿದೆ.
https://twitter.com/PMOIndia/status/1249620775679610880
ಒಟ್ಟಿನಲ್ಲಿ ಕೊರೊನಾ ವೈರಸ್ ಭೀತಿ ಬಳಿಕ ನಾಳೆಯ ಭಾಷಣ ಸೇರಿ ಮೂರನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹೀಗಾಗಿ ನಾಳೆಯೇ ಮತ್ತೊಮ್ಮೆ ದೇಶವ್ಯಾಪಿ ಲಾಕ್ ಡೌನ್ ಬಗ್ಗೆ ಘೋಷಣೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಈ ಹಿಂದೆ ಮಾರ್ಚ್ 19 ರಂದು ದೇಶವನ್ನು ಉದ್ದೇಶಿಸಿ ಮಾ.21 ರಂದು ಜನತಾ ಕರ್ಫ್ಯೂ ಮಾಡಬೇಕೆಂದು ಕೇಳಿಕೊಂಡಿದ್ದರು. ಇದಾದ ಬಳಿಕ ಮಾ.24 ರಂದು 21 ದಿನಗಳ ಲಾಕ್‍ಡೌನ್ ಘೋಷಣೆ ಮಾಡಿದ್ದರು.
ಬಳಿಕ ಏ.5 ರಂದು ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ರಾತ್ರಿ 9 ಗಂಟೆಗೆ ವಿದ್ಯುತ್ ದೀಪ ಆಫ್ ಮಾಡಿ ದೀಪ/ ಕ್ಯಾಂಡಲ್ ಲೈಟ್/ ಮೊಬೈಲ್ ಟಾರ್ಚ್ ಬೆಳಗಿ ಎಂದು ಮನವಿ ಮಾಡಿದ್ದರು. ಇದಕ್ಕೂ ದೇಶದಲ್ಲಿ ಭಾರೀ ಬೆಂಬಲ ಸಿಕ್ಕಿತ್ತು.