ಬೆಂಗಳೂರು: ಇಂದು ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕೂಡ ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯವನ್ನು ತಿಳಿಸಿದ್ದಾರೆ.
ನಾಡಿನಲ್ಲಿ ಎಲ್ಲೆಲ್ಲೂ ಕನ್ನಡದ ಕಂಪು ಮೂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್‍ನಲ್ಲಿ ಕನ್ನಡದಲ್ಲಿಯೇ ಬರೆದು ಪೋಸ್ಟ್ ಮಾಡಿ ಕನ್ನಡಿಗರಿಗೆ ಶುಭಾಶಯವನ್ನು ಹೇಳಿದ್ದಾರೆ. “ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಏಕೀಕರಣಗೊಂಡ ಕಾರಣ 1956 ರಿಂದ ಪ್ರತಿ ವರ್ಷ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.
ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ
— Narendra Modi (@narendramodi) November 1, 2017