Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

Latest

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

Public TV
Last updated: January 26, 2026 8:57 am
Public TV
Share
2 Min Read
Republic Day Narendra Modi
SHARE

ನವದೆಹಲಿ: ಇಂದು ಭಾರತ 77ನೇ ಗಣರಾಜ್ಯೋತ್ಸವ ಹಬ್ಬವನ್ನು ಆಚರಿಸುತ್ತಿದ್ದು, ದೆಹಲಿಯ ಕರ್ತವ್ಯಪಥದಲ್ಲಿ ಹತ್ತಾರು ವಿಶೇಷತೆಗಳೊಂದಿಗೆ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಶುಭಹಾರೈಸಿದ್ದಾರೆ.

ಗಣರಾಜ್ಯೋತ್ಸವ ಪ್ರಯುಕ್ತ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಗಣರಾಜ್ಯೋತ್ಸವದಂದು ನಮ್ಮ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ವಿಕಸಿತ ಭಾರತಕ್ಕಾಗಿ ಸಂಕಲ್ಪವು ಇನ್ನಷ್ಟು ಬಲಗೊಳ್ಳಲಿ ಎಂಬ ಸಂದೇಶವನ್ನು ನೀಡಿದ್ದಾರೆ.

ಇನ್ನು 77ನೇ ಗಣರಾಜ್ಯೋತ್ಸವವನ್ನು ವಂದೇ ಮಾತರಂ ಪರಿಕಲ್ಪನೆಯಲ್ಲಿ ಆಚರಿಸಲಾಗುತ್ತಿದ್ದು, ಪ್ರಜಾಪ್ರಭುತ್ವದ ಸಂಭ್ರಮ, ಸೇನಾ ಶಕ್ತಿ ಹಾಗೂ ವೈವಿಧ್ಯತೆಯ ಅನಾವರಣಕ್ಕೆ ದೇಶ ಸಾಕ್ಷಿಯಾಗಲಿದೆ. ಈ ವರ್ಷ ವಿದೇಶಿ ಅತಿಥಿಗಳಾಗಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ಲೇನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟ ಭಾಗಿಯಾಗಲಿದ್ದಾರೆ. ಇವರನ್ನು ಪದ್ಧತಿಯಂತೆ 21 ಗನ್ ಸೆಲ್ಯೂಟ್, ಗಾರ್ಡ್ ಆಫ್ ಹಾನರ್ ಮೂಲಕ ಗೌರವಿಸಲಾಗುತ್ತದೆ.

Republic Day

ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ವಂದೇ ಮಾತರಂ ಥೀಂನಲ್ಲೇ ಎಲ್ಲ ಕಾರ್ಯಕ್ರಮಗಳು ನಡೆಯಲಿದೆ. ಆಪರೇಷನ್ ಸಿಂಧೂರ ಮಿಷನ್ ಪರೇಡ್‌ನಲ್ಲಿ ಗಮನ ಸಳೆಯಲಿದೆ. ಬೆಳಗ್ಗೆ 10:30ಕ್ಕೆ ಪರೇಡ್ ಆರಂಭಗೊಳ್ಳಲಿದ್ದು, ಸುಮಾರು 90 ನಿಮಿಷಗಳ ಕಾಲ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾರತೀಯ ಸೇನೆಯು ಬ್ಯಾಟಲ್ ಅರೇ (ಯುದ್ಧ ಶ್ರೇಣಿ) ಪ್ರದರ್ಶಿಸಲಿದೆ. ಈ ವೇಳೆ ಮಿಲಿಟರಿ ಪ್ರದರ್ಶನ, ಆಧುನಿಕ ಶಸ್ತ್ರಾಸ್ತ್ರ, ಡ್ರೋನ್, ಟ್ಯಾಂಕರ್ ಗಳು ಮತ್ತು ಕ್ಷಿಪಣಿ ಸೇರಿದಂತೆ ಇನ್ನಿತರ ರಚನೆಯನ್ನು ಪ್ರದರ್ಶಿಸಲಿದೆ. ಜೊತೆಗೆ ಭಾರತೀಯ ಸೇನೆಯ ವಿವಿಧ ರಚನೆಯ ವಿಮಾನಗಳು ಮತ್ತು ಹೆಲಿಕ್ಯಾಪ್ಟರ್ ಗಳು ಕೂಡ ಪಾಲ್ಗೊಳ್ಳಲಿದೆ. ಇನ್ನು ಭಾರತೀಯ ವಾಯುಪಡೆಯ ವಿಶೇಷ ನಿವೃತ್ತ ಸೈನಿಕರ ಟ್ಯಾಬ್ಲೋ ಕೂಡ ಇದರ ಭಾಗವಾಗಲಿದೆ.

ಈ ಬಾರಿಯ ಪಥಸಂಚಲನದಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಚಿವಾಲಯಗಳು ಮತ್ತು ಇಲಾಖೆಗಳಿಂದ ಒಟ್ಟು 30 ಸ್ತಬ್ಧ ಚಿತ್ರಗಳು ಭಾಗಿಯಾಗಲಿವೆ. ಈ ಮೂಲಕ ಭಾರತದ ಸಂಸ್ಕೃತಿ, ಪರಂಪರೆ, ನಾವಿನ್ಯತೆ ಮತ್ತು ಸ್ವಾವಲಂಬತೆಯನ್ನು ಪ್ರದರ್ಶಿಸಲಿದೆ. ಪಥಸಂಚಲನದಲ್ಲಿ ಸುಮಾರು 2500 ಕಲಾವಿದರು ಭಾಗಿಯಾಗಲಿದ್ದಾರೆ. ಇದೇ ವೇಳೆ ಕೆಂಪುಕೋಟೆಯಲ್ಲಿ ಭಾರತ ಪರ್ವ, ರಾಷ್ಟ್ರೀಯ ಶಾಲಾ ಬ್ಯಾಂಡ್ ಸ್ಪರ್ಧೆ, ಪ್ರಾಜೆಕ್ಟ್ ವೀರ್ ಗಾಥಾ 5.0 ಮತ್ತು ಪ್ರಧಾನಮಂತ್ರಿಯವರ ಎನ್‌ಸಿಸಿ ರ‍್ಯಾಲಿ ನಡೆಯಲಿದೆ.

TAGGED:77ನೇ ಗಣರಾಜ್ಯೋತ್ಸವಕರ್ತವ್ಯಪಥನರೇಂದ್ರ ಮೋದಿನವದೆಹಲಿಪರೇಡ್
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Sadananda Gowda
Bengaluru City

ಮೋದಿ, ಅಮಿತ್‌ ಶಾ ನಿರ್ಧಾರದಿಂದ ನಾವೆಲ್ಲ ನಿರ್ಭೀತರಾಗಿದ್ದೇವೆ: ಸದಾನಂದ ಗೌಡ

Public TV
By Public TV
25 minutes ago
Modi 2 1
Latest

ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

Public TV
By Public TV
28 minutes ago
Thawar Chand Gehlot 1
Bengaluru City

ರಾಜ್ಯದಲ್ಲಿ ಸಾಮಾಜಿಕ, ರಾಜಕೀಯ ಚೈತನ್ಯ ಉದಯಿಸುತ್ತಿದೆ: ಗೆಹ್ಲೋಟ್‌

Public TV
By Public TV
55 minutes ago
Thawar Chand Gehlot 2
Bengaluru City

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್‌ರಿಂದ ಧ್ವಜಾರೋಹಣ

Public TV
By Public TV
57 minutes ago
russian s400 missilere
Latest

ಗಣರಾಜ್ಯೋತ್ಸವ ಸಂಭ್ರಮ – ಪರೇಡ್‌ನಲ್ಲಿಂದು ಪಾಕ್‌ ಹುಟ್ಟಡಗಿಸಿದ S-400 ವಾಯು ರಕ್ಷಣಾ ವ್ಯವಸ್ಥೆ ಪ್ರದರ್ಶನ

Public TV
By Public TV
1 hour ago
Anekal Car Accident
Bengaluru City

ಕುಡಿದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ – ಮರಕ್ಕೆ ಡಿಕ್ಕಿಯಾಗಿ ಓರ್ವ ದುರ್ಮರಣ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?