ನವದೆಹಲಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಶೀಘ್ರವೇ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಶ್ರೀಮತಿ ಸೋನಿಯಾ ಗಾಂಧಿ ಅವರು ಶೀಘ್ರವೇ ಕೋವಿಡ್‌ನಿಂದ ಗುಣಮುಖರಾಗಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋನಿಯಾ, ರಾಹುಲ್ ಗಾಂಧಿಗೆ ಇಡಿ ಸಮನ್ಸ್
Advertisement
Wishing Congress President Smt. Sonia Gandhi Ji a speedy recovery from COVID-19.
— Narendra Modi (@narendramodi) June 2, 2022
Advertisement
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಟ್ವೀಟ್ ಮೂಲಕ ತಿಳಿಸಿದ್ದರು. ಇದನ್ನೂ ಓದಿ: ನಕಲಿ ಗಾಂಧಿಗಳ ನಾಯಕತ್ವಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಬೇಸತ್ತಿದ್ದಾರೆ – ಎಚ್ಚರ ಡಿಕೆಶಿ ಎಚ್ಚರ: ಬಿಜೆಪಿ
Advertisement
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್ ಜಾರಿಗೊಳಿಸಿದ್ದು, ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು.
Advertisement
Congress President, Smt Sonia Gandhi has been meeting leaders & activists over last week, some of whom have been found Covid +ve.
Congress President had developed mild fever & Covid symptoms last evening. On testing, she has been found to be Covid positive.
1/3
— Randeep Singh Surjewala (@rssurjewala) June 2, 2022
ಈ ಕುರಿತಂತೆ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, ಕಳೆದ ವಾರ ಸೋನಿಯಾ ಗಾಂಧಿ ಅವರು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದರು. ಆದರೆ ಬುಧವಾರ ಸಂಜೆ ಜ್ವರ ಬಂದ ಹಿನ್ನೆಲೆ ಕೋವಿಡ್-19 ಪರೀಕ್ಷೆ ನಡೆಸಿದಾಗ ಅವರಿಗೆ ಪಾಸಿಟಿವ್ ಬಂದಿದೆ. ಇದೀಗ ಸೋನಿಯಾ ಗಾಂಧಿ ಅವರು ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಟ್ವೀಟ್ ಮಾಡಿದ್ದರು.