ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ದೇವರೊಂದಿಗೆ (God) ಚರ್ಚೆಗೆ ಕೂರಿಸಿದರೆ, ಅವರು ಬ್ರಹ್ಮಾಂಡ ಕಾರ್ಯನಿರ್ವಹಿಸುವ ಬಗ್ಗೆ ಮಾಡುವ ವಿವರಣೆಗೆ ದೇವರು ನಾನೇನು ಸೃಷ್ಠಿ ಮಾಡಿದ್ದೇನೆ ಎಂಬ ಗೊಂದಲಕ್ಕೊಳಗಾಗುತ್ತಾನೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿಯವರು (Rahul Gandhi) ವ್ಯಂಗ್ಯವಾಡಿದ್ದಾರೆ.
ಬುಧವಾರ ಸ್ಯಾನ್ ಫ್ರಾನ್ಸಿಸ್ಕೋದ (San Francisco) ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಗರು (BJP) ವಿಜ್ಞಾನಿಗಳಿಗೆ ವಿಜ್ಞಾನವನ್ನು ವಿವರಿಸುತ್ತಾರೆ. ಇತಿಹಾಸಕಾರರಿಗೆ ಇತಿಹಾಸವನ್ನು ವಿವರಿಸುತ್ತಾರೆ. ಅಲ್ಲದೆ ಸೈನ್ಯ ಹಾಗೂ ವಾಯುಪಡೆಗೂ ಪಾಠ ಮಾಡಲು ಹೋಗುತ್ತಾರೆ. ಆದರೆ ಅವರಿಗೆ ಅದ್ಯಾವುದರ ಬಗ್ಗೆಯೂ ತಿಳುವಳಿಕೆ ಇಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ತಾಕತ್ತಿದ್ದರೆ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಲಿ – ಓವೈಸಿ ಸವಾಲು
Advertisement
Advertisement
ದೇಶದಲ್ಲಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಸೇರಿಕೊಂಡು ಸಂವಿಧಾನದ ಮೇಲೆ ದಾಳಿ ನಡೆಸುತ್ತಿವೆ. ಭಾರತ್ ಜೋಡೋ (Bharat Jodo Yatra) ಯಾತ್ರೆಯನ್ನು ತಡೆಯಲು ಸರ್ಕಾರ ತನ್ನ ಎಲ್ಲಾ ಶಕ್ತಿಯನ್ನು ಬಳಸಿತ್ತು. ಅಲ್ಲದೆ ಜನರಿಗೆ ಬೆದರಿಕೆ ಹಾಕುವ ಮೂಲಕ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿತ್ತು. ಆದರೂ ಇದರಿಂದ ಏನೂ ಪ್ರಯೋಜನವಾಗಲಿಲ್ಲ. ಯಾತ್ರೆಯ ಪ್ರಭಾವ ಇನ್ನೂ ಹೆಚ್ಚಾಯಿತು ಎಂದಿದ್ದಾರೆ.
Advertisement
Advertisement
ಭಾರತ್ ಜೋಡೋ ಯಾತ್ರೆಯು ವಾತ್ಸಲ್ಯ, ಗೌರವ ಮತ್ತು ನಮ್ರತೆಯ ಮನೋಭಾವದಿಂದ ಆರಂಭಗೊಂಡಿತು. ಗುರುನಾನಕ್, ಗುರು ಬಸವಣ್ಣ, ನಾರಾಯಣ ಗುರು ಸೇರಿದಂತೆ ಎಲ್ಲಾ ಆಧ್ಯಾತ್ಮಿಕ ನಾಯಕರ ಇತಿಹಾಸ ಓದಬೇಕು. ಅವರು ಸಹ ಇದೇ ರೀತಿಯಲ್ಲಿ ರಾಷ್ಟ್ರವನ್ನು ಒಂದುಗೂಡಿಸಿದ್ದರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಜಾತಿಯತೆಯ ವಿಚಾರಗಳನ್ನು ಉಲ್ಲೇಖಿಸಿದ ಅವರು, ಜಾತಿ ಸಮಾಜದಲ್ಲಿ ವಿಕಿರಣದಂತೆ ಹಬ್ಬಿದೆ. ಜಾತಿ ತಾರತಮ್ಯ ಇನ್ನೂ ಉಳಿದುಕೊಂಡಿದೆ. ಈ ನಿಟ್ಟಿನಲ್ಲಿ ನ್ಯಾಯ್ (Nyuntam Aay Yojana) ಹಾಗೂ ನರೇಗಾ (NAREGA) ಯೋಜನೆಗಳು ಬಡವರಿಗೆ ಮತ್ತು ತುಳಿತಕ್ಕೊಳಗಾದವರಿಗೆ ಆರ್ಥಿಕ ನ್ಯಾಯ ಒದಗಿಸಲು ಸಹಾಯ ಮಾಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!