– ಶುಕ್ರವಾರ ದಾಲ್ ಸರೋವರ ತೀರದಲ್ಲಿ ಮೋದಿ ಯೋಗ ಪ್ರದರ್ಶನ
ಶ್ರೀನಗರ: ಪ್ರಧಾನಿ ಮೋದಿ (Narendra Modi) ಅವರ 2 ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಇಂದು (ಗುರುವಾರ) ಆರಂಭವಾಗಲಿದೆ. 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಮೋದಿ ಅವರ ಮೊದಲ ಭೇಟಿಯೂ ಇದಾಗಿದೆ.
ಶ್ರೀನಗರದಲ್ಲಿ (Srinagar) ಜೂನ್ 21ರಂದು (ಶುಕ್ರವಾರ) ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ಭದ್ರತೆ ನಿಯೋಜಿಸಲಾಗಿದೆ. ಇದನ್ನೂ ಓದಿ: ವಿಶ್ವ ಆರೋಗ್ಯಕ್ಕಾಗಿ ಯೋಗ – ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ
Advertisement
Advertisement
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದ್ದು, ಪ್ರಧಾನಿ ಅವರ ಈ ಭೇಟಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಪ್ರಕಾರ, ಹಲವು ಹಂತಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೂಗೊಳ್ಳಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಧಿ ಕುಮಾರ್ ಬರ್ಡಿ ತಿಳಿಸಿದ್ದಾರೆ.
Advertisement
ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಡ್ರೋನ್ (Drone) ಮತ್ತು ಕ್ವಾಡ್‌ಕಾಪ್ಟರ್ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಡ್ರೋನ್ ನಿಯಮಗಳು 2021ರ ನಿಬಂಧನೆಗಳ ಪ್ರಕಾರ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಎಂಎಸ್‌ಪಿ ಹೆಚ್ಚಿಸಿದ ಕೇಂದ್ರ – ಇಲ್ಲಿದೆ ನೋಡಿ ದರ ಪಟ್ಟಿ..
Advertisement
ದಾಲ್ ಸರೋವರದ ತೀರದಲ್ಲಿ ಯೋಗ:
10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ಪ್ರಧಾನಿ ಮೋದಿ ಅವರು ಯೋಗ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಿದ್ದಾರೆ. ಶ್ರೀನಗರದ ದಾಲ್ ಸರೋವರದ (Darl Lake) ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ 9,000 ಮಂದಿ ಯೋಗ ಪ್ರದರ್ಶನ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳನ್ನು ವರ್ಚುವಲ್ ಆಗಿ ಸಂಪರ್ಕಿಸುವ ಯೋಜನೆ ಇದೆ ಪ್ರತಿ ಜಿಲ್ಲೆಯಿಂದ 2,000 ಜನರು ಸಂಪರ್ಕ ಸಾಧಿಸಿದರೂ, ಕಾರ್ಯಕ್ರಮದಲ್ಲಿ ಸುಮಾರು 50,000 ಭಾಗವಹಿಸಿದಂತಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ. ಇದನ್ನೂ ಓದಿ: ರಾಮಾಯಣ ನಾಟಕ ಪ್ರದರ್ಶಿಸಿದ್ದಕ್ಕೆ ವಿದ್ಯಾರ್ಥಿಗಳಿಗೆ 1.02 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ
ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ:
ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಥೀಮ್ (ವಸ್ತು ವಿಷಯ) ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ಎಂದಾಗಿದೆ. ಜೂನ್ 21 ರಂದು ಪ್ರಧಾನಿ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವಿಶೇಷ ದಿನವನ್ನು ಆಚರಣೆ ಮಾಡಲಿದ್ದಾರೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.