ರಾಂಚಿ: ಜಾರ್ಖಂಡ್‌ನ ದಿಯೋಘರ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊತ್ತೊಯ್ಯಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷವನ್ನು (Technical Fault) ಕಂಡುಬಂದಿತು, ಪರಿಣಾಮ ಪ್ರಧಾನಿ ಮೋದಿ (Narendra Modi) ದೆಹಲಿಗೆ ಮರಳಲು ವಿಳಂಬವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರು ಚುನಾವಣಾ ರಾಜ್ಯವಾದ ಜಾರ್ಖಂಡ್‌ನಲ್ಲಿ (Jharkhand) ತಮ್ಮ ಕಾರ್ಯಕ್ರಮಗಳನ್ನು ಮುಗಿಸಿ ದೆಹಲಿಗೆ ಮರಳಲು ವಿಮಾನ ನಿಲ್ದಾಣಕ್ಕೆ ಬಂದ ನಂತರ ಈ ಘಟನೆ ನಡೆದಿದೆ. ಸುರಕ್ಷತಾ ಕ್ರಮವಾಗಿ ತಾಂತ್ರಿಕ ತಂಡಗಳು ಸಮಸ್ಯೆಯನ್ನು ಗುರುತಿಸಿ, ಸರಿಪಡಿಸಿದ ನಂತರ ವಿಮಾನ ಟೇಕ್ ಆಫ್ ಆಗಿದೆ.
Advertisement
Advertisement
ಇದಕ್ಕೂ ಮುನ್ನ ಅವರು ಬುಡಕಟ್ಟು ವೀರ ಬಿರ್ಸಾ (Birsa Munda anniversary) ಮುಂಡಾ ಅವರನ್ನು ಗೌರವಿಸುವ ಜಂಜಾಟಿಯಾ ಗೌರವ್ ದಿವಸ್ ಆಚರಣೆಯ ಅಂಗವಾಗಿ ಜಾರ್ಖಂಡ್‌ನಲ್ಲಿ ಎರಡು ರ‍್ಯಾಲಿಗಳನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಿದರು.
Advertisement
ಪ್ರತ್ಯೇಕ ಬೆಳವಣಿಗೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಜಾರ್ಖಂಡ್‌ಗೆ ಬಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಹಾರಾಟವನ್ನು ಕೆಲ ಕಾಲ ಏರ್ ಟ್ರಾಫಿಕ್ ಕಂಟ್ರೋಲ್ ತಡೆ ಹಿಡಿಯಿತು. ಉದ್ದೇಶ ಪೂರ್ವಕವಾಗಿ ಇದನ್ನು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರು. ಆರೋಪದ ಒಂದು ಗಂಟೆಯ ಬಳಿಕ ಹಾರಾಟಕ್ಕೆ ಅನುಮತಿ ನೀಡಲಾಯಿತು.
Advertisement
ಮಹಾರಾಷ್ಟ್ರದ ಹಿಂಗೋಲಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ್ದ ಗೃಹ ಸಚಿವ ಅಮಿತ್ ಶಾ ಹೆಲಿಕಾಪ್ಟರ್ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಬಗ್ಗೆ ಖುದ್ದು ಮಾಹಿತಿ ಹಂಚಿಕೊಂಡ ಅಮಿತ್ ಶಾ, ಬಿಜೆಪಿ ನ್ಯಾಯಯುತ ಚುನಾವಣೆ ಮತ್ತು ಆರೋಗ್ಯಕರ ಚುನಾವಣಾ ವ್ಯವಸ್ಥೆಯನ್ನು ನಂಬುತ್ತದೆ ಚುನಾವಣಾ ಆಯೋಗದ ಎಲ್ಲಾ ನಿಯಮಗಳನ್ನು ಅನುಸರಿಸುತ್ತದೆ ನಾವೆಲ್ಲರೂ ಆರೋಗ್ಯಕರ ಚುನಾವಣಾ ವ್ಯವಸ್ಥೆಗೆ ಕೊಡುಗೆ ನೀಡಬೇಕು ಭಾರತವನ್ನು ವಿಶ್ವದ ಪ್ರಬಲ ಪ್ರಜಾಪ್ರಭುತ್ವವಾಗಿ ಇರಿಸುವಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರ ಹೆಲಿಕಾಪ್ಟರ್ ಅನ್ನು ಚುನಾವಣಾ ಆಯೋಗ ತಪಾಸಣೆಗೆ ಒಳಪಡಿಸುವುದಿಲ್ಲ ಎಂದು ಮಾಜಿ ಸಿಎಂ ಉದ್ಧವ್ ಠಾಕ್ರೆ ಆರೋಪಿಸಿದ್ದರು. ವಿಪಕ್ಷ ನಾಯಕರ ಹೆಲಿಕ್ಯಾಪ್ಟರ್ ತಪಾಸಣೆ ಮಾಡಲಾಗುತ್ತದೆ, ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರ ಹೆಲಿಕ್ಯಾಪ್ಟರ್ ಶೋಧ ನಡೆಸುವುದಿಲ್ಲ, ಪ್ರಧಾನಿ ಮೋದಿಗಾಗಿ ವಿಪಕ್ಷ ನಾಯಕ ಹೆಲಿಕ್ಯಾಪ್ಟರ್ ಹಾರಾಟ ತಡೆ ಹಿಡಿಯಲಾಗುತ್ತಿದೆ ಎಂದು ಆರೋಪಿಸಿದ್ದರು, ಉದ್ಧವ್ ಠಾಕ್ರೆ ಆರೋಪದ ಬೆನ್ನಲೆ ಅಮಿತ್ ಶಾ ಪ್ರಯಾಣಿಸಿದ ಹೆಲಿಕಾಪ್ಟರ್ ತಪಾಸಣೆ ನಡೆದಿದೆ.
ಅಲ್ಲದೇ ಜಾರ್ಖಂಡ್‌ನ ಗೊಡ್ಡಾದಲ್ಲಿ ದಿಯೋಘರ್‌ನಿಂದ ಕೇವಲ 80 ಕಿ.ಮೀ ದೂರದಲ್ಲಿ, ರಾಹುಲ್ ಗಾಂಧಿ ಅವರ ಚಾಪರ್ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ (ಎಟಿಸಿ) ಅನುಮತಿ ಪಡೆಯಲು 45 ನಿಮಿಷಗಳ ವಿಳಂಬ ಎದುರಿಸಿದರು. ಇದು ವಿಪಕ್ಷ ನಾಯಕರ ಪ್ರಚಾರಕ್ಕೆ ಅಡ್ಡಿಪಡಿಸಲು ಉದ್ದೇಶಪೂರ್ವಕವಾಗಿ ಮಾಡಿರುವ ಪ್ಲ್ಯಾನ್ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಇದನ್ನೂ ಓದಿ: ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್
ಅಲ್ಲದೇ ಜಾರ್ಖಂಡ್‌ನ ಗೊಡ್ಡಾದಲ್ಲಿ ದಿಯೋಘರ್‌ನಿಂದ ಕೇವಲ 80 ಕಿ.ಮೀ ದೂರದಲ್ಲಿ, ರಾಹುಲ್ ಗಾಂಧಿ ಅವರ ಚಾಪರ್ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ (ATC) ಅನುಮತಿ ಪಡೆಯಲು 45 ನಿಮಿಷಗಳ ವಿಳಂಬ ಎದುರಿಸಿದರು. ಇದು ವಿಪಕ್ಷ ನಾಯಕರ ಪ್ರಚಾರಕ್ಕೆ ಅಡ್ಡಿಪಡಿಸಲು ಉದ್ದೇಶಪೂರ್ವಕವಾಗಿ ಮಾಡಿರುವ ಪ್ಲ್ಯಾನ್ ಎಂದು ಕಾಂಗ್ರೆಸ್ ಆರೋಪಿಸಿತ್ತು. ಇದನ್ನೂ ಓದಿ: ಬಿಷ್ಣೋಯ್ ಗ್ಯಾಂಗ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ದೇಹವನ್ನು 35 ಪೀಸ್ ಮಾಡಿದ್ದ ಆರೋಪಿ ಅಫ್ತಾಬ್