ನವದೆಹಲಿ: ಬಿಜೆಪಿಯನ್ನು (BJP) ನಾಯಿ ಹಾಗೂ ಇಲಿ ಎಂದು ಟೀಕಿಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಔತಣ ಕೂಟದಲ್ಲಿ ಭಾಗಿಯಾಗಿ ಸಿರಿಧಾನ್ಯ ಖಾದ್ಯ ಭೋಜನ ಸವಿದಿದ್ದಾರೆ.
As we prepare to mark 2023 as the International Year of Millets, attended a sumptuous lunch in Parliament where millet dishes were served. Good to see participation from across party lines. pic.twitter.com/PjU1mQh0F3
— Narendra Modi (@narendramodi) December 20, 2022
Advertisement
2023ರ ರಾಗಿ ವರ್ಷದ ಅಂಗವಾಗಿ ಸಂಸತ್ತಿನಲ್ಲಿ ಕೃಷಿ ಸಚಿವ ನರೇಂದ್ರ ತೋಮರ್ (Narendra Tomar) ಅವರು ಆಯೋಜಿಸಿದ್ದ ಸಿರಿಧಾನ್ಯ ಖಾದ್ಯ ಭೋಜನ ಕೂಟದಲ್ಲಿ ಭಾಗವಹಿಸಿದ್ದರು. ಈ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಹಾಗೂ ಇತರ ಸಂಸದರೂ ಹಾಜರಿದ್ದರು.
Advertisement
Advertisement
ಔತಣ ಕೂಟದಲ್ಲಿ ಖಿಚಡಿ, ರಾಗಿ ದೋಸೆ, ರಾಗಿ ರೊಟ್ಟಿ, ಜೋಳದ ರೊಟ್ಟಿ, ಹಲ್ದಿ ಸಬ್ಜಿ, ಬಾಜ್ರಾ, ಕುರ್ಮಾ ಹಾಗೂ ರಾಗಿಯಿಂದ ಸಿಹಿ ತಿನಿಸುಗಳನ್ನು ಸಿದ್ಧಪಡಿಸಲಾಗಿತ್ತು. ವಿಶೇಷ ಖಾದ್ಯಗಳನ್ನು ತಯಾರಿಸಲು ಕರ್ನಾಟಕದಿಂದ ಬಾಣಸಿಗರನ್ನು ಕರೆತರಲಾಗಿತ್ತು. ಇದನ್ನೂ ಓದಿ: ಈ ದೇಶಕ್ಕಾಗಿ BJP ನಾಯಕನ ಮನೆ ನಾಯಿಯೂ ಸತ್ತಿಲ್ಲ – ಕೋಲಾಹಲ ಎಬ್ಬಿಸಿದ ಖರ್ಗೆ ಹೇಳಿಕೆ
Advertisement
ಬಳಿಕ ಪ್ರಧಾನಿ ಮೋದಿ ಅವರು, 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಆಚರಿಸಲು ತಯಾರಿ ನಡೆಸುತ್ತಿರುವಾಗ, ಸಂಸತ್ತಿನಲ್ಲಿ ಸಿರಿಧಾನ್ಯ ಭೋಜನಕೂಟದಲ್ಲಿ ಭಾಗವಹಿಸಿದ್ದೇವೆ. ಪಕ್ಷಾತೀತವಾಗಿ ಭಾಗವಹಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ಊಟದ ಕೆಲವು ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ – 33 ಲಕ್ಷ ಚಂದಾದಾರರಿದ್ದ 3 ಯೂಟ್ಯೂಬ್ ಚಾನೆಲ್ ಪತ್ತೆ
ಪ್ರಧಾನಿ ನರೇಂದ್ರ ಮೋದಿಯವರ ಉಪಕ್ರಮದ ಮೇರೆಗೆ ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತರರಾಷ್ಟ್ರೀಯ ರಾಗಿ ವರ್ಷ ಎಂದು ಘೋಷಿಸಿದೆ. ಭಾರತ ಸರ್ಕಾರವು 2018ರಲ್ಲಿ ರಾಗಿಯನ್ನು ಪೌಷ್ಠಿಕ ಧಾನ್ಯವೆಂದು ಘೋಷಿಸಿತ್ತು. ಜೊತೆಗೆ ಪೋಷಣ್ ಮಿಷನ್ ಅಭಿಯಾನದಲ್ಲಿ ಸೇರಿಸಲಾಯಿತು. ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಅಡಿಯಲ್ಲಿ 14 ರಾಜ್ಯಗಳ 212 ಜಿಲ್ಲೆಗಳಲ್ಲಿ ರಾಗಿಗಾಗಿ ಪೌಷ್ಟಿಕ ಏಕದಳ ಘಟಕವನ್ನು ಅಳವಡಿಸಲಾಗಿದೆ.
कांग्रेस ने हमेशा भारत को जोड़ने की बात की है।
देश की एकता के लिए इंदिरा गाँधी जी ने अपनी जान दी, राजीव गाँधी जी ने अपनी जान दी!
भाजपा और आरएसएस के किसी भी नेता ने देश को जोड़ने के लिए कोई भी बलिदान नहीं दिया।
आज़ादी की लड़ाई में भी, उन्होंने अंग्रेजों से केवल माफ़ी माँगी! pic.twitter.com/A39bBRDEAD
— Mallikarjun Kharge (@kharge) December 20, 2022
`ಭಾರತ್ ಜೋಡೋ ಯಾತ್ರೆ’ ರ‍್ಯಾಲಿಯನ್ನು ಟೀಕಿಸಿದ್ದ ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಅವರು ಹರಿಹಾಯ್ದಿದ್ದರು. ಸ್ವಾತಂತ್ರ‍್ಯ ಹೋರಾಟಕ್ಕಾಗಿ ಬಿಜೆಪಿಯ ಒಂದು ನಾಯಿ ಕೂಡ ಸತ್ತಿಲ್ಲ ಎಂದು ಟೀಕಿಸಿದ್ದರು. ಇದರಿಂದ ಮಂಗಳವಾರ ಸಂಸತ್ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಯಾಯಿತು. ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿದ ಬಿಜೆಪಿ, ರಾಜ್ಯಸಭೆ ಕಲಾಪದ ವೇಳೆ ಕ್ಷಮೆ ಕೋರುವಂತೆ ಖರ್ಗೆ ಅವರನ್ನು ಒತ್ತಾಯಿಸಿತು. ಆದರೆ, ಸಂಸತ್ತಿನ ಹೊರಗೆ ಆಡಿದ ಮಾತುಗಳಿಗೆ ಕ್ಷಮೆ ಕೋರುವುದಿಲ್ಲ ಎಂದು ಖರ್ಗೆ ಹೇಳಿದ್ದಕ್ಕೆ ಭಾರೀ ಗಲಾಟೆಯೇ ನಡೆದಿತ್ತು.