ರೋಮ್: ಪ್ರಧಾನಿ ನರೇಂದ್ರ ಮೋದಿ (Narendra Modi) ಇಟಲಿಯ ರಾಜಧಾನಿ ರೋಮ್‌ಗೆ (Rome) ಭೇಟಿ ನೀಡಿದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ (Giorgia Meloni) ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೋಲೇಟ್ (Melody Chocolate) ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಮೋದಿ ಹಾಗೂ ಮೆಲೋನಿ ಉತ್ತಮ ಸ್ನೇಹಿತರಾಗಿದ್ದು, ಇವರಿಬ್ಬರ ಸ್ನೇಹವನ್ನು ಸಾಮಾಜಿಕ ಜಾಲತಾಣದಲ್ಲಿ (Meloni+Modi) ‘ಮೆಲೋಡಿ’ ಎಂದೇ ಕರೆಯಲಾಗುತ್ತಿತ್ತು. ಇದೀಗ ಮೋದಿ ‘ಮೆಲೋಡಿ’ ಚಾಕೋಲೇಟ್ ಕೊಡುವ ಮೂಲಕ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದ್ದಾರೆ. ಇದನ್ನೂ ಓದಿ: ಸದ್ಯಕ್ಕಿಲ್ಲ ಜಿಬಿಎ ಚುನಾವಣೆ – ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್
ಮೋದಿ ಚಾಕೋಲೇಟ್ ಕೊಡುವ ವೀಡಿಯೋವನ್ನು ಮೆಲೋನಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಉಡುಗೊರೆ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ. ಸದ್ಯ ಈ ವೀಡಿಯೋ 19.6 ಮಿಲಿಯನ್ ವೀಕ್ಷಣೆಯನ್ನು ಪಡೆದಿದೆ. ಇದನ್ನೂ ಓದಿ: ಭಯೋತ್ಪಾದಕ ಸಂಘಟನೆಗೆ ಯುವಕರ ನೇಮಕ – ಅಪರಾಧಿ ಹಮ್ರಾಜ್ ವರ್ಶಿದ್ ಶೇಖ್‌ಗೆ 7 ವರ್ಷ ಜೈಲು
View this post on Instagram
ಮೋದಿ ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ್ದು, ಮೋದಿಯವರಿಗೆ ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿರುವ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜಾರ್ಜಿಯಾ ಮೆಲೋನಿ ಅವರು, ವೆಲ್ಕಮ್ ಟು ರೋಮ್, ಮೈ ಫ್ರೆಂಡ್ ಎಂದು ಹೇಳಿದ್ದು, ಮೋದಿ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ – ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIR
ಈ ನಡುವೆ ಪ್ರಧಾನಿ ಮೋದಿಯವರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು, ರೋಮ್‌ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೆಲೋನಿ ಜೊತೆ ಭೋಜನ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆಯಿತು. ಬಳಿಕ ಐತಿಹಾಸಿಕ ಕೊಲೊಸಿಯಂಗೆ ಭೇಟಿ ನೀಡಿದೆವು. ವಿವಿಧ ಮಹತ್ವದ ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡೆವು. ಇಂದು ನಡೆಯಲಿರುವ ಮಾತುಕತೆಗಾಗಿ ಎದುರು ನೋಡುತ್ತಿದ್ದೇನೆ. ಭಾರತ-ಇಟಲಿ ಸ್ನೇಹವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಚರ್ಚೆಯನ್ನು ಮುಂದುವರಿಸಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಅತಿದೊಡ್ಡ ಚಿನ್ನ ಲೂಟಿ – ಹೋಲ್‌ಸೇಲ್ ಖರೀದಿ ನೆಪದಲ್ಲಿ 1 ಕೆಜಿ 850 ಗ್ರಾಂ ಚಿನ್ನ ಕಳ್ಳತನ

