ನವದೆಹಲಿ: ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
Advertisement
Advertisement
ರೈಲು ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿದ ನಂತರ ಮಾತನಾಡಿದ ಪ್ರಧಾನಿ ಮೋದಿ, ಇದೊಂದು ನೋವಿನ ಘಟನೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ನೆರವು ನೀಡಲಿದೆ. ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ರೈಲ್ವೆ ಹಳಿಗಳ ದುರಸ್ತಿ ಕಾರ್ಯ ನಡೆಯುತ್ತಿದೆ. ನಾನು ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
Advertisement
ಆಸ್ಪತ್ರೆ ಭೇಟಿಗೂ ಮುನ್ನ ಪ್ರಧಾನಿ ಮೋದಿ ಅವರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕನಿಷ್ಠ 288 ಜನರು ಸಾವನ್ನಪ್ಪಿದ ಮತ್ತು 800 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಸ್ಥಳದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಮೋದಿ ಅವರು ಫಕೀರ್ ಮೋಹನ್ ಆಸ್ಪತ್ರೆ ಬಾಲಾಸೋರ್‌ಗೆ ಭೇಟಿ ನೀಡಿದ್ದರು.
Advertisement
ಶುಕ್ರವಾರ ಸಂಜೆ ನಡೆದ ಒಡಿಶಾ ರೈಲು ದುರಂತಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ಅಪಘಾತದ ಕುರಿತು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಅಪಘಾತದ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದರು. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಮೋದಿ ಹೇಳಿದ್ದರು.
ಸಂತ್ರಸ್ತ ಕುಟುಂಬಗಳಿಗೆ ಯಾವುದೇ ತೊಂದರೆ ಆಗದಂತೆ, ಅವರು ಅಗತ್ಯವಿರುವ ಸಹಾಯವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ವಿಶೇಷ ಕಾಳಜಿ ವಹಿಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ.