– `Hala Modi’ ಕಾರ್ಯಕ್ರಮದಲ್ಲಿ 5,000 ಮಂದಿ ಪಾಲ್ಗೊಳ್ಳುವ ನಿರೀಕ್ಷೆ
ನವದೆಹಲಿ/ಕುವೈತ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದಿನಿಂದ 2 ದಿನಗಳ ಕಾಲ ಕುವೈತ್ (Kuwait) ಪ್ರವಾಸ ಕೈಗೊಂಡಿದ್ದಾರೆ. ದ್ವಿಪಕ್ಷೀಯ ಸಂಬಂಧ ಮತ್ತು ಇಂಧನ ಸಹಕಾರ ವೃದ್ಧಿಗಾಗಿ ಮೋದಿ ಕುವೈತ್‌ಗೆ ಭೇಟಿ ನೀಡುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿದೆ.
Today and tomorrow, I will be visiting Kuwait. This visit will deepen India’s historical linkages with Kuwait. I look forward to meeting His Highness the Amir, the Crown Prince and the Prime Minister of Kuwait.
This evening, I will be interacting with the Indian community and…
— Narendra Modi (@narendramodi) December 21, 2024
Advertisement
ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಈ ಮೂಲಕ 43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಗಲ್ಫ್ ರಾಷ್ಟ್ರಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಕುವೈತ್‌ನಲ್ಲಿಂದು ನಡೆಯುವ ʻಹಾಲಾ ಮೋದಿ ಮೆಗಾ ಡಯಾಸ್ಪೊರಾʼ (‘Hala Modi’ Mega Diaspora) ಕಾರ್ಯಕ್ರಮಕ್ಕೆ ಈಗಾಗಲೇ ವೇದಿಕೆ ಸಿದ್ಧಪಡಿಸಲಾಗಿದೆ. ಸುಮಾರು 5,000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ. ಇದನ್ನೂ ಓದಿ: ಸಿಟಿ ರವಿ ಕೇಸ್ – ಪ್ರತಿಷ್ಠಿಗೆ ಬಿದ್ದು ಏನೋ ಮಾಡಲು ಹೋಗಿ ಯಡವಟ್ಟು ಮಾಡಿತಾ ಸರ್ಕಾರ?
Advertisement
Advertisement
ಈ ಕುರಿತು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಅರಣು ಕುಮಾರ್ ಚಟರ್ಜಿ ಮಾಹಿತಿ ನೀಡಿದ್ದಾರೆ. ಉಭಯ ರಾಷ್ಟ್ರಗಳ ದ್ವಿಪಕ್ಷಿಯ ಸಂಬಂಧ ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಮೋದಿ ಭೇಟಿ ನೀಡುತ್ತಿದ್ದಾರೆ. ಮೊದಲು ಬಯಾನ್ ಅರಮನೆಯಲ್ಲಿ ಗೌರವಾನ್ವಿತ ಗೌರವ ಸ್ವೀಕರಿಸಲಿದ್ದಾರೆ. ಬಳಿಕ ಕುವೈತ್ ನಾಯಕತ್ವದೊಂದಿಗೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ಸಂಸ್ಕೃತಿ ಮತ್ತು ಜನರ ನಡುವಿನ ಸಂಬಂಧಗಳು ಹಾಗೂ ಇದಕ್ಕಾಗಿ ಉಭಯ ರಾಷ್ಟ್ರಗಳು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ. ನಂತರ ಔತಣಕೂಟದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಪ್ರಧಾನಿಗಳ ಈ ಭೇಟಿಯು ಭವಿಷ್ಯದಲ್ಲಿ ಉತ್ತಮ ಸಹಕಾರಕ್ಕಾಗಿ ಹೊಸ ಮಾರ್ಗಗಳನ್ನು ಸೃಷ್ಟಿಸುತ್ತದೆ. ಭಾರತ ಮತ್ತು ಗಲ್ಫ್ ಸಹಕಾರ ಮಂಡಳಿಯ ನಡುವಿನ ಬಾಂಧವ್ಯ ಹೆಚ್ಚಿಸುತ್ತದೆ. ಮುಖ್ಯವಾಗಿ, ಭಾರತ ಸರ್ಕಾರವು ವಿದೇಶದಲ್ಲಿರುವ ಎಲ್ಲಾ ಕಾರ್ಮಿಕರ ಕಲ್ಯಾಣಕ್ಕೆ ಪ್ರಾಮುಖ್ಯತೆ ನೀಡುತ್ತಲೇ ಇದೆ. ಕುವೈತ್‌ನಲ್ಲಿ ಸದ್ಯ 10 ಲಕ್ಷ ಭಾರತೀಯರು ಇದ್ದಾರೆ. ಈ ಕಾರಣಕ್ಕಾಗಿ ಅಲ್ಲಿನ ಕಾರ್ಮಿಕ ಸಮುದಾಯಕ್ಕೂ ಭೇಟಿ ನೀಡಿವ ಯೋಜನೆ ಇದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಂದಿರ-ಮಸೀದಿ ವಿವಾದ ಹೆಚ್ಚಳಕ್ಕೆ RSS ಕಳವಳ; ಇದು ಒಪ್ಪಲಾಗದು ಎಂದ ಮೋಹನ್ ಭಾಗವತ್