Connect with us

ಪ್ರಧಾನಿ ಮೋದಿ ಪತ್ನಿ ಜಶೋದಾ ಬೆನ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ

ಪ್ರಧಾನಿ ಮೋದಿ ಪತ್ನಿ ಜಶೋದಾ ಬೆನ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತ

ಜೈಪುರ: ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರ್ ಅಪಘಾತಕ್ಕೊಳಗಾದ ಘಟನೆ ರಾಜಸ್ತಾನದಲ್ಲಿ ನಡೆದಿದೆ.

ಈ ಘಟನೆ ಕೋಟಾ- ಚಿತ್ತೂರ್ ಹೆದ್ದಾರಿಯಿಂದ ಸುಮಾರು 55 ಕಿ.ಮೀ ದೂರದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾ ಬೆನ್ ಅಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ಕೂಡಲೇ ಜಶೋದಾ ಬೆನ್ ಅವರನ್ನು ಪ್ರಾಥಮಿಕ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದು, ಆರೋಗ್ಯವಾಗಿದ್ದಾರೆ ಅಂತ ಚಿತ್ತೋರ್ ಗಢ್ ನ ಉಪವಿಭಾಗೀಯ ಮ್ಯಾಜಿಸ್ಟ್ರೇಟರ್ ಸುರೇಶ್ ಕಾರ್ತಿಕ್ ತಿಳಿಸಿದ್ದಾರೆ.

ಕಾರಿನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದು, ಅವರೆಲ್ಲರೂ ಸಂಬಂಧಿಕರೆಂದು ತಿಳಿದುಬಂದಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಜಯೇಂದ್ರ ಸಣ್ಣಪುಟ್ಟ ಗಾಯಗಳಾಗಿವೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲರೂ ಗುಜರಾತ್ ನ ಬರನ್ ಎಂಬಲ್ಲಿನ ಅತ್ರು ಗೆ ಪ್ರವಾಸ ಬೆಳೆಸಿದ್ದರು ಎಂಬುದಾಗಿ ವರದಿಯಾಗಿದೆ.

ಘಟನೆ ಕುರಿತು ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿದ್ದಾರೆ. ಜಶೋದಾ ಬೆನ್ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

https://twitter.com/divyaspandana/status/961126420545265664

Advertisement
Advertisement