380ರ ಪೈಕಿ ಈಗಾಗಲೇ ಮೋದಿ 270 ಗೆದ್ದಿದ್ದಾರೆ : ಅಮಿತ್‌ ಶಾ ವಿಶ್ವಾಸ

Public TV
1 Min Read
amit shah

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈಗಾಗಲೇ ಪೂರ್ಣ ಬಹುಮತ ಪಡೆದಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

ಪಶ್ಚಿಮ ಬಂಗಾಳದ (West Bengal) ಬಂಗಾವ್‌ನಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ (Lok Sabha Election) ನಾಲ್ಕು ಹಂತಗಳ ಮತದಾನ ಪೂರ್ಣಗೊಂಡಿದ್ದು 380 ಸ್ಥಾನಗಳಿಗೆ ಮತದಾನ ನಡೆದಿದೆ. ಬಂಗಾಳದಲ್ಲಿ 18 ಸ್ಥಾನಗಳಿಗೆ ಮತದಾನ ಮುಗಿದಿದೆ. 380 ಕ್ಷೇತ್ರಗಳ  ಪೈಕಿ ಪ್ರಧಾನಿ ಮೋದಿ ಈಗಾಗಲೇ 270 ಸ್ಥಾನಗಳನ್ನು ಗೆದ್ದಿದ್ದಾರೆ ಎಂದು ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದರು.  ಇದನ್ನೂ ಓದಿ: ವರ್ಷದಿಂದ ವರ್ಷಕ್ಕೆ ರಾಕೆಟ್‌ ವೇಗದಲ್ಲಿ ಚಿಮ್ಮುತ್ತಿದೆ ಭಾರತದ ರಕ್ಷಣಾ ರಫ್ತು!

ಮಮತಾ ಬ್ಯಾನರ್ಜಿಯವರು (Mamata Banerjee) ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಸಾಧ್ಯವಿಲ್ಲ. ಯಾಕೆಂದರೆ ಇದು ಕೇಂದ್ರ ಸರ್ಕಾರದ ಕಾನೂನು ಎಂದು ತಿಳಿಸಿದರು.

ಸಿಎಎ ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಯಾರಾದರೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಸುಳ್ಳು ಹೇಳುತ್ತಿದ್ದಾರೆ. ಆದರೆ ಸಿಎಎಯಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಇದರಿಂದಾಗಿ ದೇಶದಲ್ಲಿ ಗೌರವದಿಂದ ಬದುಕಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

 

Share This Article