Bengaluru City
ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ್ರು ಮೋದಿ, ಅಮಿತ್ ಶಾ

ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ವಿವಿಧ ಗಣ್ಯರು ಶುಭ ಕೋರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದಾರೆ. ಮೋದಿ ಹಾಗೂ ಅಮಿತ್ ಶಾ ಕನ್ನಡದಲ್ಲೇ ಟ್ವೀಟ್ ಮಾಡಿರುವುದು ವಿಶೇಷವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
— Narendra Modi (@narendramodi) November 1, 2020
ಅಮಿತ್ ಶಾ ಟ್ವೀಟ್ ಮಾಡಿ, ಕರ್ನಾಟಕದ ಜನತೆಗೆ ‘ಕರ್ನಾಟಕ ರಾಜ್ಯೋತ್ಸವ’ದ ಶುಭಾಶಯಗಳು. ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಕರ್ನಾಟಕ ಸದಾ ಮಹತ್ವದ ಪಾತ್ರವನ್ನು ನಿಭಾಯಿಸುತ್ತಾ ಬಂದಿದೆ. ಮುಂಬರುವ ವರ್ಷಗಳಲ್ಲೂ ರಾಜ್ಯ ಮತ್ತಷ್ಟು ಸಮೃದ್ಧಿ ಹೊಂದಿ ಪ್ರಗತಿ ಸಾಧಿಸಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕದ ಜನತೆಗೆ ‘ಕರ್ನಾಟಕ ರಾಜ್ಯೋತ್ಸವ’ದ ಶುಭಾಶಯಗಳು. ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಕರ್ನಾಟಕ ಸದಾ ಮಹತ್ವದ ಪಾತ್ರವನ್ನು ನಿಭಾಯಿಸುತ್ತಾ ಬಂದಿದೆ. ಮುಂಬರುವ ವರ್ಷಗಳಲ್ಲೂ ರಾಜ್ಯ ಮತ್ತಷ್ಟು ಸಮೃದ್ಧಿ ಹೊಂದಿ ಪ್ರಗತಿ ಸಾಧಿಸಲಿ ಎಂದು ಹಾರೈಸುತ್ತೇನೆ.
— Amit Shah (@AmitShah) November 1, 2020
ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ! ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬರೆದು ಕರ್ನಾಟಕದ ಮ್ಯಾಪ್ ಇರುವ ಚಿತ್ರ ಹಾಕಿದ್ದಾರೆ.
ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ! pic.twitter.com/ettDDO3l0e
— B.S. Yediyurappa (@BSYBJP) November 1, 2020
ಕನ್ನಡ ರಾಜ್ಯೋತ್ಸವ ಎಂದರೆ.. ನಮ್ಮ ಜನ, ಭಾಷೆ, ಸಂಸ್ಕೃತಿ, ನೆಲ, ಜಲ ಎಲ್ಲವನ್ನೂ ಒಳಗೊಂಡ ಕನ್ನಡತನವನ್ನು ಉಳಿಸಿ-ಬೆಳೆಸಲು ದುಡಿದ-ಮಡಿದ ಹಿರಿಯ ಮಹಾಪುರುಷರಿಗೆ ತಲೆಬಾಗುವ ದಿನ. ಆ ಪುಣ್ಯಪುರುಷರನ್ನು ಒಡಲಾಳದ ಕೃತಜ್ಞತೆಯಿಂದ ಸ್ಮರಿಸೋಣ. ಕನ್ನಡ ಮೊದಲು, ನಾನು ಮೊದಲು ಕನ್ನಡಿಗ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಕನ್ನಡ ರಾಜ್ಯೋತ್ಸವ ಎಂದರೆ..
ನಮ್ಮ ಜನ,ಭಾಷೆ, ಸಂಸ್ಕೃತಿ, ನೆಲ, ಜಲ ಎಲ್ಲವನ್ನೂ ಒಳಗೊಂಡ
ಕನ್ನಡತನವನ್ನು ಉಳಿಸಿ-ಬೆಳೆಸಲು ದುಡಿದ-ಮಡಿದ ಹಿರಿಯ ಮಹಾಪುರುಷರಿಗೆ ತಲೆಬಾಗುವ ದಿನ.ಆ ಪುಣ್ಯಪುರುಷರನ್ನು ಒಡಲಾಳದ ಕೃತಜ್ಞತೆಯಿಂದ ಸ್ಮರಿಸೋಣ.
ಕನ್ನಡ ಮೊದಲು,
ನಾನು ಮೊದಲು ಕನ್ನಡಿಗ.#ಕನ್ನಡರಾಜ್ಯೋತ್ಸವ pic.twitter.com/4mhVmi1DQ4— Siddaramaiah (@siddaramaiah) November 1, 2020
