ನವದೆಹಲಿ: 66 ನೇ ವರ್ಷಕ್ಕೆ ಕಾಲಿಟ್ಟ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರಿಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ (Narendra Modi), ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರದ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಬೆಳಗ್ಗೆ ಸಚಿವರಿಗೆ ದೂರವಾಣಿ ಕರೆ ಮಾಡಿ ಶುಭ ಕೋರಿದರು. ಈ ವೇಳೆ ಸಚಿವರು ಉಪ ರಾಷ್ಟ್ರಪತಿಗಳಿಗೆ ಧನ್ಯವಾದಗಳನ್ನು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸಚಿವರಿಗೆ ಭಾನುವಾರವೇ ಜನ್ಮದಿನ ಶುಭಾಶಯ ಪತ್ರ ಕಳಿಸಿ ಶುಭ ಕೋರಿದ್ದರು. ಸೋಮವಾರ ಬೆಳಗ್ಗೆಯೂ ಪ್ರಧಾನಿಗಳು ಸಚಿವರಿಗೆ ಶುಭ ಕೋರಿದ್ದಾರೆ. ಇದನ್ನೂ ಓದಿ: ಸಂಸತ್‌ಗೆ ಪ್ಯಾಲೆಸ್ತೀನ್ ಬ್ಯಾಗ್ ಹಾಕಿಕೊಂಡು ಬಂದ ಪ್ರಿಯಾಂಕಾ – ಎಲ್ಲಾ ಸುದ್ದಿಗಾಗಿ ಎಂದ ಬಿಜೆಪಿ ಸಂಸದ
Advertisement
ನನ್ನ ಪುತ್ರ ಶ್ರೀ @hd_kumaraswamy
ಅವರಿಗೆ ಜನ್ಮದಿನದ ಪ್ರೀತಿಪೂರ್ವಕ ಶುಭಾಶಯಗಳು.
ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹಾರೈಸುತ್ತೇನೆ.
1/2 pic.twitter.com/ItODKotSZJ
— H D Devegowda (@H_D_Devegowda) December 16, 2024
Advertisement
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಜೋಶಿ, ಗಜೇಂದ್ರ ಸಿಂಗ್ ಶೇಖಾವತ್, ಜೋಲ್ ಒರಂ, ಡಾ.ವೀರೇಂದ್ರ ಕುಮಾರ್, ಶರ್ಭಾನಂದ ಸೋನಾವಾಲ್, ರಾಮ್ ಮೋಹನ್ ನಾಯ್ಡು, ಮನೋಹರ್ ಲಾಲ್, ಧರ್ಮೇಂದ್ರ ಪ್ರಧಾನ್, ಪಿಯೂಷ್ ಗೋಯಲ್, ಡಾ.ಎಸ್.ಜೈಶಂಕರ್, ಕೇಂದ್ರದ ರಾಜ್ಯ ಸಚಿವರಾದ ವಿ.ಸೋಮಣ್ಣ, ಶ್ರೀನಿವಾಸ ಭೂಪತಿರಾಜು ವರ್ಮ, ಕಿಶನ್ ರೆಡ್ಡಿ ಅವರು ಕೇಂದ್ರ ಸಚಿವರಿಗೆ ಶುಭ ಕೋರಿದ್ದಾರೆ.
Advertisement
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಸರ್ಮ, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಹೆಚ್ಡಿಕೆ ಅವರಿಗೆ ಹಾರೈಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಾ.ಕೆ.ಸುಧಾಕರ್, ಸಂಸದ ಬಿ.ವೈ.ರಾಘವೇಂದ್ರ, ತೇಜಸ್ವಿ ಸೂರ್ಯ, ರಾಜ್ಯದ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಸಚಿವರಿಗೆ ಜನ್ಮದಿನ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಡಿಕೆಶಿ ಮೇಲಿನ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ – ಜ.22 ಕ್ಕೆ ವಿಚಾರಣೆ ಮುಂದೂಡಿಕೆ
Advertisement
ತಂದೆ ಆಶೀರ್ವಾದ ಪಡೆದ ಸಚಿವರು
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಕ್ಸ್ ಖಾತೆಯ ಮೂಲಕ ಬೆಳಗ್ಗೆಯೇ ಸಚಿವರನ್ನು ಆಶೀರ್ವದಿಸಿದ್ದರು. ನನ್ನ ಪುತ್ರ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಪ್ರೀತಿಪೂರ್ವಕ ಶುಭಾಶಯಗಳು. ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಶಿವನ ದೇಗುಲದಲ್ಲಿ ಪೂಜೆ, ವಿಶೇಷಚೇತನ ಮಕ್ಕಳ ಶಾಲೆಗೆ ಭೇಟಿ
ಸೋಮವಾರ ಬೆಳಗ್ಗೆಯೇ ಸಚಿವ ಕುಮಾರಸ್ವಾಮಿ ಅವರು ನವದೆಹಲಿಯಲ್ಲಿರುವ ಹೌಜ್ ಕಾಸ್‌ನಲ್ಲಿರುವ ಶ್ರೀ ಶಿವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅಭಿಷೇಕ ಮತ್ತು ಪೂಜೆಯಲ್ಲಿ ಪಾಲ್ಗೊಂಡ ಸಚಿವರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಆರ್.ಕೆ. ಪುರಂ ಸೆಕ್ಟರ್ 5ರಲ್ಲಿರುವ ರಾಷ್ಟ್ರೀಯ ವಿಶೇಷ ಚೇತನ ಮಕ್ಕಳ ಶಾಲೆಗೆ ತೆರಳಿ ಮಕ್ಕಳ ಜತೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸಚಿವರು ಮಕ್ಕಳಿಗೆ ಸ್ವೆಟರ್‌ಗಳನ್ನು, ಸಿಹಿಯನ್ನು ಹಂಚಿ ಕೆಲ ಸಮಯ ಅಲ್ಲಿಯೇ ಕಳೆದರು. ಇದನ್ನೂ ಓದಿ: ಉದ್ದವ್ ಜೊತೆ ಮೈತ್ರಿ ಕಡಿತಗೊಳಿಸಿ – ಕಾಂಗ್ರೆಸ್, ಶರದ್ ಪವರ್‌ಗೆ ಉಲೇಮಾ ಮಂಡಳಿ ಒತ್ತಾಯ