ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿಯೇ: ಕಾಂಗ್ರೆಸ್‌ ಗೇಲಿಗೆ ಬಿಜೆಪಿ ತಿರುಗೇಟು

Public TV
1 Min Read
BJP Congress

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರು (Bengaluru) ಭೇಟಿ ವಿಚಾರವಾಗಿ ಬಿಜೆಪಿ ನಾಯಕರನ್ನು ಗೇಲಿ ಮಾಡಿದ್ದ ಕಾಂಗ್ರೆಸ್‌ಗೆ (Congress) ಬಿಜೆಪಿ (BJP) ತಿರುಗೇಟು ನೀಡಿದೆ.

ಟ್ವೀಟ್‌ ಮೂಲಕ ಕಾಂಗ್ರೆಸ್‌ಗೆ ಠಕ್ಕರ್‌ ಕೊಟ್ಟಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದಿದ್ದು ಚಂದ್ರಯಾನದ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೇ ಹೊರತು ಪಕ್ಷದ ಸಭೆಗಲ್ಲ. ಆದಾಗ್ಯೂ ನಮ್ಮ ಪಕ್ಷದ ಪ್ರಮುಖರು ಜನಸಾಮಾನ್ಯರಂತೆ ನಿಂತು ಅವರ ಸಂತಸದಲ್ಲಿ ಪಾಲ್ಗೊಂಡು ಅವರೊಡನೆ ತಮ್ಮ ಅಭಿಮಾನ ಪ್ರದರ್ಶಿಸಿರುವುದರಲ್ಲಿ ಹುಳುಕು ಹುಡುಕಲೆತ್ನಿಸಿರುವ ನಿಮಗೆ ಕಾಮಾಲೆಯಂತೆ ಏನೋ ಕಾಯಿಲೆ ಇರಬಹುದು ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಇಸ್ರೋ ವಿಜ್ಞಾನಿಗಳ ಭೇಟಿಗೆ ಸೀಮಿತವಾದ ಪ್ರಧಾನಿ ಭೇಟಿ

ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿಯೇ ಎಂಬಂತೆ ಗಾಂಧಿ ಕುಟುಂಬದ ಜೀತಕ್ಕೆ ಬಿದ್ದವರಂತೆ ಸೇವೆ ಮಾಡುವ ಕಾಂಗ್ರೆಸ್ಸಿಗರಿಗೆ ಪ್ರಧಾನಮಂತ್ರಿಗಳ ಅಧಿಕೃತ ಸರ್ಕಾರಿ ಭೇಟಿಗೂ, ಅನೌಪಚಾರಿಕ ಭೇಟಿಗೂ ವ್ಯತ್ಯಾಸ ತಿಳಿದಿಲ್ಲ ಎಂದು ಟಾಂಗ್‌ ಕೊಟ್ಟಿದೆ.

ತಮ್ಮ ಮೋಜಿಗಾಗಿ ಲಕ್ಷದ್ವೀಪಕ್ಕೆ ತೆರಳಲು ಸೇನಾ ನೌಕೆ ಬಳಸುತ್ತಿದ್ದವರು ಬಿಟ್ಟು ಹೋದ ಸಂಸ್ಕಾರದಲ್ಲಿ ಬೆಳೆದವರಿಗೆ ಇವು ಅರ್ಥ ಆಗದು. ಅಂದಹಾಗೆ ಮಲ್ಲಿಕಾರ್ಜುನ ಖರ್ಗೆಯವರಿಗೆ ‘ಗಾಂಧಿ’ ಕುಟುಂಬ ಕೊಟ್ಟಿರುವ ಮರ್ಯಾದೆಯನ್ನು ಕರ್ನಾಟಕ ನೋಡಿದೆ ಎಂದು ಬಿಜೆಪಿ ಚಾಟಿ ಬೀಸಿದೆ. ಇದನ್ನೂ ಓದಿ: ಕರ್ನಾಟಕದಿಂದ ಪಾಠ ಕಲಿತ ಬಿಜೆಪಿ ಹೈಕಮಾಂಡ್ – ಮಧ್ಯಪ್ರದೇಶದಲ್ಲಿ ಮಾಡಿದ ಬದಲಾವಣೆ ಏನು?

Web Stories

Share This Article