ಬೆಳಗಾವಿ: ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವಿದ್ದು, ಅಕ್ಟೋಬರ್ 7ರಂದು ಮೋದಿ ಮೊದಲ ಬಾರಿ ಗುಜರಾತಿನ ಮುಖ್ಯಮಂತಿಯಾಗಿ 20 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದಂತೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರ ವರೆಗೆ 20 ದಿನಗಳ ಕಾಲ ಸೇವೆ ಹಾಗೂ ಸಮರ್ಪಣಾ ಅಭಿಯಾನವನ್ನು ಆಚರಿಸಲಾಗುವು ಎಂದು ಬಿಜೆಪಿ ರಾಜ್ಯ ವಕ್ತಾರ ಮಾರುತಿ ಝಿರಲಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದಂತೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರ ವರೆಗೆ 20 ದಿನಗಳ ಕಾಲ ಸೇವೆ ಹಾಗೂ ಸಮರ್ಪಣಾ ಅಭಿಯಾನವನ್ನು ಆಚರಿಸಲಾಗುವು. ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಾಗೂ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಅಧಿಕಾರ ಹಿಡಿದು 20 ವರ್ಷಗಳು ಕಳೆದಿವೆ. ಹೀಗಾಗಿ 20 ದಿನಗಳ ಕಾಲ ಈ ಸೇವಾ ಮತ್ತು ಸಮರ್ಪಣಾ ಅಭಿಯಾನವನ್ನು ನಡೆಸಲಾಗುವುದು ಎಂದರು.
ಬಿಜೆಪಿ ಕಾರ್ಯಕರ್ತರು ಕೇವಲ ಬಾಯಿ ಮಾತಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರೆ ಸಾಲದು. ಜೆ.ಪಿ.ನಡ್ಡಾ ಅವರ ಆದೇಶದಂತೆ ಮೈ ಸೇವಾ ಟ್ರಿಬ್ಯೂಟ್ ಎಂಬ ಆ್ಯಪ್‍ನ್ನು ಬಿಡುಗಡೆ ಮಾಡಲಾಗಿದೆ. ಕಾರ್ಯಕರ್ತರು ಬೂತ್ ಮಟ್ಟಗಳಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಉತ್ತಮ ಕಾರ್ಯಗಳನ್ನು ಈ ಅವಧಿಯಲ್ಲಿ ಮಾಡಿ, ಈ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡಬೇಕು. ಈ ಮೂಲಕ ಪ್ರಧಾನಿ ಮೋದಿಯವರಿಗೆ ಶುಭಾಶಯ ಕೋರಬೇಕೆಂದು ಹೇಳಿದರು.