Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಸಭೆಯಲ್ಲಿ ರಾಜ್ಯದ ಹಿತವನ್ನು ಮರೆತ ಬಿಜೆಪಿ ಸಂಸದರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಪ್ರಧಾನಿ ಮೋದಿ ಸಭೆಯಲ್ಲಿ ರಾಜ್ಯದ ಹಿತವನ್ನು ಮರೆತ ಬಿಜೆಪಿ ಸಂಸದರು

Karnataka

ಪ್ರಧಾನಿ ಮೋದಿ ಸಭೆಯಲ್ಲಿ ರಾಜ್ಯದ ಹಿತವನ್ನು ಮರೆತ ಬಿಜೆಪಿ ಸಂಸದರು

Public TV
Last updated: March 31, 2017 1:39 pm
Public TV
Share
2 Min Read
modi mahadayi bjp
SHARE

ನವದೆಹಲಿ: ಕರ್ನಾಟಕ ರಾಜ್ಯದ ಹಿತ ಕಾಪಾಡಲು ಸಿಕ್ಕದ್ದ ಮಹತ್ವದ ಅವಕಾಶವನ್ನ ಬಳಸಿಕೊಳ್ಳದೇ ರಾಜ್ಯದ ಬಿಜೆಪಿ ಸಂಸದರು ತಮ್ಮ ಸ್ವಾರ್ಥ ಮೆರೆದಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿರುವ ಆತ್ಮರಾಮ ನಾಡಕರ್ಣಿ ಅವರಿಗೆ ಮಹದಾಯಿ ವಿಚಾರದಲ್ಲಿ ಗೋವಾ ಪರ ವಾದ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡ ಮೇಲೆ ಕರ್ನಾಟಕದ ವಿರುದ್ಧ ಗೋವಾ ಪರ ವಾದ ಮಾಡಲು ಅವಕಾಶ ನೀಡಿದ್ದು ಸರಿಯೇ ಎಂಬ ಪ್ರಶ್ನೆಯನ್ನ ಸಂಸದರು ಕೇಂದ್ರ ಸರ್ಕಾರದ ಮುಂದೆ ಕೇಳಬೇಕಿತ್ತು. ಆದರೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ದಕ್ಷಿಣ ಭಾರತ ರಾಜ್ಯಗಳ ಬಿಜೆಪಿ ಸಂಸದರ ಸಭೆಯಲ್ಲಿ ರಾಜ್ಯದ ಸಂಸದರು ತುಟಿ ಬಿಚ್ಚಿಲ್ಲ.

ಬದಲಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನ ರಾಜ್ಯದಲ್ಲಿ ಪ್ರಚಾರ ಮಾಡುವ ನಿಟ್ಟಿನಲ್ಲಿ ಮೋದಿ ಅವರ ಕಟ್ಟಪ್ಪಣೆಗೆ ತಲೆ ಅಲ್ಲಾಡಿಸಿ ಬಂದಿದ್ದಾರೆ. ಆದ್ರೆ ಮೋದಿ ಅವರು ಕರೆದ ಸಂಸದರ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ. ರಾಜ್ಯದ ಸಂಸದರು ಮೋದಿ ಅವರನ್ನ ಕೇಳುವ ಧೈರ್ಯ ಕೂಡಾ ಪ್ರದರ್ಶಿಸಿಲ್ಲ ಎನ್ನಲಾಗಿದೆ.

ಗೋವಾ ಚುನಾವಣೆ ಬಳಿಕ ಮಹದಾಯಿ ಸಮಸ್ಯೆ ಬಗೆಹರಿಸುವ ನಿಶಾನೆ ತೋರಿದ್ದ ಪ್ರಧಾನಿ ಮೋದಿ ಅವರು ಗೋವಾ ಚುನಾವಣೆ ಮುಗಿದು, ಅಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ರೂ, ಮಹದಾಯಿ ವಿಚಾರದಲ್ಲಿ ಮಾತ್ರ ಮತ್ತೆ ಮೌನವಾಗಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಈಗ ಎದ್ದಿದೆ.

ಪ್ರಶ್ನೆ ಯಾಕೆ ಮಾಡಬೇಕಿತ್ತು?
ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ಆಯ್ಕೆಯಾಗುವ ವಕೀಲರು ಖಾಸಗಿ ಮೊಕದ್ದಮೆಗಳ ವಕೀಲಿ ಕೈಗೊಳ್ಳು­ವಂತಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಯ ಮೊಕದ್ದಮೆಗಳ ವಿನಾ ರಾಜ್ಯ ಸರ್ಕಾರಗಳು, ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳ ಪರ ವಕಾಲತ್ತು ಮಾಡಲು ಕೇಂದ್ರ ಅನುಮತಿ ಪಡೆಯಬೇಕು. ಹೀಗಿರುವ ಎರಡೂ ರಾಜ್ಯಗಳ ನಡುವೆ ತಟಸ್ಥ ಧೋರಣೆ ಅನುಸರಿಸಬೇಕಾದ ಕೇಂದ್ರ ಸರ್ಕಾರ ಆತ್ಮರಾಮ ನಾಡಕರ್ಣಿ ಅವರಿಗೆ ಗೋವಾದ ಪರ ವಾದ ಮಾಡಲು ಅನುಮತಿ ನೀಡಿದ್ದು ಸರಿಯೇ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ಸಂಸದರು ಪ್ರಶ್ನೆ ಮಾಡಬೇಕಿತ್ತು.

ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ನೇಮಕಗೊಳ್ಳುವ ಮುನ್ನ ನಾಡಕರ್ಣಿ ಗೋವಾದ ಅಡ್ವೊಕೇಟ್ ಜನರಲ್ ಆಗಿದ್ದರು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆಪ್ತರು ಕೂಡ ಆಗಿದ್ದಾರೆ. ಕೇಂದ್ರದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ನಾಡಕರ್ಣಿ ಅವರನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್‍ಗಳಲ್ಲಿ ಒಬ್ಬರನ್ನಾಗಿ ನೇಮಕ ಮಾಡಲಾಯಿತು.

ರೈತರಿಗೆ ಸಂಕಷ್ಟ:
ಬರ ಪರಿಹಾರವಾಗಿ ರಾಜ್ಯಕ್ಕೆ ಕೇಂದ್ರ ಸರ್ಕಾರ 1782 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ನೀಡಿದ್ದು, ಅದರಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದು ಉಳಿದ ಹಣವನ್ನು ಬಿಡುಗಡೆ ಮಾಡಿಲ್ಲ. ಆರಂಭದಲ್ಲಿ ಬಿಡುಗಡೆಯಾದ 450 ಕೋಟಿ ರೂ. ಖರ್ಚು ಮಾಡಿದ ಬಳಿಕ ಉಳಿದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಹೇಳಿದರೆ ರಾಜ್ಯ ಸರ್ಕಾರ ಒಂದೇ ಬಾರಿಗೆ ಈ ಹಣವನ್ನು ಬಿಡುಗಡೆ ಮಾಡಿ ಎಂದು ತನ್ನ ವಾದವನ್ನು ಮಂಡಿಸುತ್ತಿದೆ. ಒಟ್ಟಿನಲ್ಲಿ ಈ ಎರಡೂ ಸರ್ಕಾರದ ಕಚ್ಚಾಟದಿಂದಾಗಿ ರೈತರಿಗೆ ಸಮಸ್ಯೆಯಾಗಿದ್ದು, ಈ ವಿಚಾರದ ಬಗ್ಗೆಯೂ ಇಂದು ರಾಜ್ಯ ಸಂಸದರು ಸಭೆಯಲ್ಲಿ ಪ್ರಸ್ತಾಪ ಮಾಡಿಲ್ಲ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

TAGGED:atmaram nadkarnibjpkarnatakamahadayi rivermodinarendra modiಆತ್ಮರಾಮ ನಾಡಕರ್ಣಿಕರ್ನಾಟಕಗೋವಾನರೇಂದ್ರ ಮೋದಿಬಿಜೆಪಿಮಹದಾಯಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
14 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
15 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
53 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
57 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?