ಚಿಕ್ಕಬಳ್ಳಾಪುರ/ಬೆಂಗಳೂರು: ರಾಜ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ಸಹೋದರ ಸೋಮಭಾಯ್ ಮೋದಿ (Somabhai Modi) ಇಂದು ಆಗಮಿಸಿದ್ದಾರೆ. ಗುಜರಾತ್‌ನ ವಡೋದರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಯಲಹಂಕದಲ್ಲಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಯಲಹಂಕದಲ್ಲಿರುವ ಸಾಯಿಬಾಬಾ ಮಂದಿರಕ್ಕೆ ಹಾಗೂ ಶ್ರೀಗಂಚಿ ಸಮಾಜ್ ಪೂರ್ಣೇಶ್ವರ ಟ್ರಸ್ಟ್‌ಗೆ ಭೇಟಿ ನೀಡಲಿದ್ದಾರೆ. ತದನಂತರ ಸಂಜೆ 4 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಮರಳಿ ರಾತ್ರಿ 7:45 ಕ್ಕೆ ಗುಜರಾತ್‌ಗೆ ವಾಪಾಸ್ ಆಗಲಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿ, ದ್ವೇಷದಿಂದ ಬಿಜೆಪಿ ವಿರುದ್ಧ ಹಗರಣ ಆರೋಪ: ಕಾರಜೋಳ ಕಿಡಿ
ಇಂದು ಬೆಳಗ್ಗೆ 9:20ಕ್ಕೆ ಸೋಮಭಾಯ್ ಮೋದಿ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿತ್ತು. ಆದರೆ ವಿಮಾನ 1 ಗಂಟೆ ವಿಳಂಬವಾದ ಕಾರಣ ತಡವಾಗಿ ಆಗಮಿಸಿದರು. ಏರ್‌ಪೋರ್ಟ್ನಲ್ಲಿ ಪ್ರಧಾನಿ ಮೋದಿ ಸಹೋದರನಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ, ಪೇಟಾ ತೊಡಿಸಿ ಸನ್ಮಾನಿಸಲಾಯಿತು.