ವಾಷಿಂಗ್ಟನ್: ರಷ್ಯಾ-ಉಕ್ರೇನ್ ನಡುವಿನ ಯುದ್ಧ (Russia Ukraine War) ನಿಲ್ಲಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಸಾಧ್ಯ ಎಂದು ಅಮೆರಿಕ (USA) ಹೇಳಿದೆ.
Advertisement
ಯುದ್ಧ ನಿಲ್ಲಿಸಲು ರಷ್ಯಾಗೆ (Russia) ಇನ್ನೂ ಸಮಯವಿದೆ. ಆದ್ರೆ ಯುದ್ಧ ನಿಲ್ಲಿಸುವಂತೆ ರಷ್ಯಾ ಮನವೊಲಿಸುವ ಕಾರ್ಯವನ್ನು ಭಾರತದ ಪ್ರಧಾನ ಮೋದಿ ಕೈಗೊಂಡರೆ ನಾವು ಸ್ವಾಗತಿಸುತ್ತೇವೆ. ಪ್ರಧಾನಿ ಮೋದಿ ಕೈಗೊಳ್ಳಲು ಸಿದ್ಧರಿರುವ ಯಾವುದೇ ಪ್ರಯತ್ನಗಳ ಬಗ್ಗೆ ಮಾತನಾಡಲು ನಾವು ಮುಕ್ತರಾಗಿದ್ದೇವೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಮಂಡಳಿ ವಕ್ತಾರ ಜಾನ್ ಕಿರ್ಬೆ ಹೇಳಿದ್ದಾರೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF
Advertisement
Advertisement
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾಸ್ಕೋದಲ್ಲಿ (Moscow) ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಅಮೆರಿಕದ ಈ ಹೇಳಿಕೆ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: Turkey, Syria Earthquakeː ವರ್ಲ್ಡ್ ಬ್ಯಾಂಕ್‌ನಿಂದ 1.78 ಬಿಲಿಯನ್ ಡಾಲರ್ ನೆರವು ಘೋಷಣೆ
Advertisement
ಕಳೆದ ಎರಡು ದಿನಗಳ ಹಿಂದೆಯಷ್ಟೇ ಅಜಿತ್ ದೋವಲ್ (Ajit Doval), ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಿದ್ದರು. ಪ್ರಾದೇಶಿಕ ವಿಷಯಗಳ ಬಗ್ಗೆಯೂ ಚರ್ಚಿಸಿದ್ದರು. ಸಭೆಯಲ್ಲಿ ದೋವಲ್ ಅವರು ಭಯೋತ್ಪಾದನೆಯನ್ನು ರಫ್ತು ಮಾಡಲು ಅಫ್ಘಾನ್ ಪ್ರದೇಶವನ್ನು ಬಳಸಲು ಯಾವುದೇ ದೇಶವನ್ನು ಅನುಮತಿಸಬಾರದು. ಅಗತ್ಯವಿರುವ ಸಮಯದಲ್ಲಿ ಭಾರತ ಎಂದಿಗೂ ಅಫ್ಘಾನ್ ಜನರನ್ನು ಕೈಬಿಡುವುದಿಲ್ಲ ಎಂದು ಪ್ರತಿಪಾದಿಸಿದ್ದರು. ಇದನ್ನೂ ಓದಿ:
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k