Tuesday, 19th November 2019

Recent News

ನೆಹರುರಂತೆ ಮೋದಿ ವರ್ಚಸ್ವಿ ನಾಯಕ: ರಜನಿಕಾಂತ್

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಬಳಿಕ ಭಾರತ ಕಂಡ ವರ್ಚಸ್ವಿ ನಾಯಕ ಎಂದು ನಟ, ರಾಜಕಾರಣಿ ರಜನಿಕಾಂತ್, ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ್ದಾರೆ.

ಚೆನ್ನೈನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯ ಗೆಲುವು ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ನನಗೂ ಆಮಂತ್ರಣ ಬಂದಿದೆ. ನಾನು ಕೂಡ ಹಾಜರಾಗುತ್ತೇನೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ. ಇದು ಸೂಕ್ತ ಕ್ರಮವಲ್ಲ. ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ಸರ್ಕಾರವಷ್ಟೇ ಅಲ್ಲ, ಪ್ರಬಲ ವಿಪಕ್ಷದ ಅಗತ್ಯವೂ ಇದೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರು ತಾವು ಸಮರ್ಥ ನಾಯಕರು ಎಂಬುದನ್ನು ಸಾಬೀತು ಮಾಡಬೇಕು. ಈ ನಿಟ್ಟಿನಲ್ಲಿ ನಡೆಯಬೇಕೇ ಹೊರತು ರಾಜೀನಾಮೆ ನೀಡಬಾರದು ಎಂದು ಕಿವಿಮಾತು ಹೇಳಿದ್ದಾರೆ.

Leave a Reply

Your email address will not be published. Required fields are marked *