Connect with us

Corona

ಎರಡನೇ ಹಂತದಲ್ಲಿ ಪ್ರಧಾನಿ ಮೋದಿ, ಎಲ್ಲ ರಾಜ್ಯಗಳ ಸಿಎಂಗಳಿಗೆ ಲಸಿಕೆ

Published

on

– 50 ವರ್ಷ ಮೇಲ್ಪಟ್ಟವರಿಗೆ ಕೊರೊನಾ ವ್ಯಾಕ್ಸಿನ್

ನವದೆಹಲಿ: ಬಹು ದಿನಗಳಿಂದ ಕಾಯುತ್ತಿದ್ದ ಕೊರೊನಾ ಲಸಿಕೆ ಹಂಚಿಕೆ ಕಳೆದ ವಾರ ಆರಂಭವಾಗಿದ್ದು, ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗೆ ನೀಡಲಾಗುತ್ತಿದೆ. ಆದರೆ ಪ್ರಧಾನಿ ಮೋದಿ ಹಾಗೂ ಜನಪ್ರತಿನಿಧಿಗಳು ಯಾವಾಗ ವ್ಯಾಕ್ಸಿನ್ ಪಡೆಯುತ್ತಾರೆ ಎಂಬ ಪ್ರಶ್ನೆ ಎದ್ದಿತ್ತು. ಇದಕ್ಕೆ ಇದೀಗ ಉತ್ತರ ಸಿಕ್ಕಿದೆ.

ಎರಡನೇ ಹಂತದ ಲಸಿಕೆ ವಿತರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಲಸಿಕೆ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜನವರಿ 16 ರಂದು ಲಸಿಕೆ ಹಂಚಿಕೆಯನ್ನು ಆರಂಭಿಸಲಾಗಿದೆ. ಆದರೆ ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಲಸಿಕೆ ಪಡೆದಿದ್ದಾರೆ. ಎರಡನೇ ಹಂತದಲ್ಲಿ ಪ್ರಧಾನಿ ಮೋದಿ ಸೇರಿ 50 ವರ್ಷ ಮೇಲ್ಪಟ್ಟ ಎಲ್ಲ ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಕೊರೊನಾ ಲಸಿಕೆ ಪಡೆಯಲಿದ್ದಾರೆ.

ದೇಶದಲ್ಲಿ ಈಗಾಗಲೇ ಸೀರಂ ಸಂಸ್ಥೆಯ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ. ಕೊರೊನಾ ವಾರಿಯರ್ಸ್ ಈಗಾಗಲೇ ಲಸಿಕೆ ಪಡೆಯುತ್ತಿದ್ದಾರೆ. ಆದರೆ ನಿಗದಿತ ಗುರಿ ತಲುಪಲು ಸಾಧ್ಯವಾಗುತ್ತಿಲ್ಲ. ಎಲ್ಲ ರಾಜ್ಯಗಳಲ್ಲಿ ನಿಗದಿತ ಗುರಿ ತಲುಪಲು ಹರಸಾಹಸ ಮಾಡುತ್ತಿದ್ದಾರೆ.

ಇದೀಗ ಎರಡನೇ ಸುತ್ತಿನಲ್ಲಿ 50 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲಿದ್ದಾರೆ. ಲಸಿಕೆ ಹಂಚಿಕೆ ಆರಂಭಕ್ಕೂ ಮುನ್ನ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಯಾರೂ ಹೆದರುವ ಹಾಗೂ ವ್ಯಾಕ್ಸಿನ್ ಪಡೆಯಲು ಹರಸಾಹಸ ಪಡುವ ಅಗತ್ಯವಿಲ್ಲ. ಎರಡನೇ ಸುತ್ತಿನಲ್ಲಿ ನಮ್ಮ ಸರದಿ ಬರಲಿದೆ ಎಂದು ತಿಳಿಸಿದ್ದರು.

ಸಂಸದರು, ಶಾಸಕರು ಹಾಗೂ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವ ಇತರರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಪರಿಗಣಿಸಿ ಲಸಿಕೆ ನೀಡಬೇಕು ಎಂದು ಹರಿಯಾಣ, ಬಿಹಾರ ಹಾಗೂ ತೆಲಂಗಾಣ ಸೇರಿದಂತೆ ಇತರೆ ರಾಜ್ಯದ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು. ಯಾವುದೇ ಕಾರಣಕ್ಕೂ ಸರತಿಯನ್ನು ಜಂಪ್ ಮಾಡಬಾರದು ಎಂದು ಪ್ರಧಾನಿ ಮೋದಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಹೀಗಾಗಿ ಮೊದಲ ಹಂತದಲ್ಲಿ ಕೇವಲ ಕೊರೊನಾ ವಾರಿಯರ್ಸ್ ಗೆ ಮಾತ್ರ ಲಸಿಕೆ ನೀಡಲಾಗಿದೆ.

Click to comment

Leave a Reply

Your email address will not be published. Required fields are marked *