ಚಿತ್ರರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ- ನರೇಂದ್ರ ಮೋದಿ ಸಂತಾಪ

Public TV
1 Min Read
dwarakish 11

ಸ್ಯಾಂಡಲ್‌ವುಡ್ ನಟ ದ್ವಾರಕೀಶ್ (Dwarakish) ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಚಿತ್ರರಂಗಕ್ಕೆ ದ್ವಾರಕೀಶ್ ಕೊಡಗೆ ಅಪಾರವಾಗಿದ್ದು, ಅವರ ನಿಧನದಿಂದ ಬೇಸರವಾಗಿದೆ ಎಂದು ಪಿಎಂ ನರೇಂದ್ರ ಮೋದಿ (Narendra Modi) ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

ಚಿತ್ರೋದ್ಯಮಕ್ಕೆ ಅವರ ಕೊಡುಗೆ ಅಪಾರವಾಗಿದೆ. ದಶಕಗಳ ಕಾಲ ಮರೆಯಲಾಗದ ಸಿನಿಮಾಗಳು ಮತ್ತು ನಟನೆಯ ಮೂಲಕ ತಲುಪಿದ್ದಾರೆ. ಪ್ರೇಕ್ಷಕರನ್ನು ರಂಜಿಸಿ, ಹೊಸಬರನ್ನು ಬೆಂಬಲಿಸುವುದರ ಜೊತೆಗೆ ಚಿತ್ರರಂಗವನ್ನು ರೂಪಿಸುವಲ್ಲಿ ಅವರ ಪಾತ್ರ ಕೂಡ ದೊಡ್ಡದು ಎಂದಿದ್ದಾರೆ. ಅವರ ನಿಧನದಿಂದ ದುಃಖವಾಗಿದೆ. ಅವರನ್ನು ಸದಾ ಸ್ಮರಿಸುತ್ತೇವೆ. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ನರೇಂದ್ರ ಮೋದಿ ಅವರು ಬರೆದುಕೊಂಡಿದ್ದಾರೆ.

ಹಿರಿಯ ನಟ ದ್ವಾರಕೀಶ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಾಳೆ (ಏ.17) ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಏಳು ಗಂಟೆಯಿಂದ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.

Share This Article