ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಗುರುವಾರ) ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಭಾಷಣದೊಂದಿಗೆ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕೊನೆಗೊಳಿಸಿದರು.
ಪ್ರಧಾನಿಯವರು ಈಗ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ (Vivekananda Rock Memorial) ಇಂದಿನಿಂದ ಜೂನ್ 1 ರವರೆಗೆ ಅಂದರೆ ಎರಡು ದಿನಗಳ ಕಾಲ (45 ಗಂಟೆಗಳ) ಧ್ಯಾನ ಮಾಡಲಿದ್ದಾರೆ.
Tamil Nadu | Prime Minister Narendra Modi arrived at Vivekananda Rock Memorial in Kanyakumari
He will meditate from 30th May evening to 1st June evening.
PM Modi will meditate day and night at the same place where Swami Vivekanand did meditation, at the Dhyan Mandapam. pic.twitter.com/OhCFgb3bPG
— ANI (@ANI) May 30, 2024
ಮಾರ್ಚ್ 16 ರಂದು ಚುನಾವಣಾ ಆಯೋಗವು (EC) ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದಾಗಿನಿಂದ ಇಂದಿನವರೆಗೆ ಪ್ರಧಾನಿಯವರು ಒಟ್ಟು 206 ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದಾರೆ. ಅಲ್ಲದೇ ಒಟ್ಟು 80 ಸಂದರ್ಶನಗಳನ್ನು ನೀಡಿದ್ದಾರೆ. ಮತದಾನ ಆರಂಭವಾದಾಗಿನಿಂದ ಸರಾಸರಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಸಂದರ್ಶನಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ; 33 ವರ್ಷಗಳ ಹಿಂದಿನ ಫೋಟೊ ವೈರಲ್
2019 ರ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿಯವರು ಸುಮಾರು 145 ರ್‍ಯಾಲಿಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಕಳೆದ ಬಾರಿಗಿಂತ ಈ ಬಾರಿ ಅವರು ಹೆಚ್ಚು ಚುನಾವಣಾ ಪ್ರಚಾರ ಹಾಗೂ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಐದು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಪ್ರಚಾರದ ಅವಧಿ 68 ದಿನಗಳಿದ್ದರೆ, ಈ ಬಾರಿ 76 ದಿನಗಳು ಇದ್ದವು.
ಚುನಾವಣೆಯಲ್ಲಿ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಬಲಪಡಿಸಲು ಪ್ರಯತ್ನಿಸುತ್ತಿದೆ. ಈ ಮೂರು ರಾಜ್ಯಗಳಲ್ಲಿ 2019 ರ ಚುನಾವಣೆಯಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ತನ್ನ ಬಲವನ್ನು ಉಳಿಸಿಕೊಳ್ಳಲು ಮತ್ತು ತೆಲಂಗಾಣದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಪಕ್ಷವು ಪ್ರಯತ್ನಿಸುತ್ತಿದೆ. 2019 ರಲ್ಲಿ ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದರೆ, ತೆಲಂಗಾಣದಲ್ಲಿ ನಾಲ್ಕು ಸ್ಥಾನಗಳಲ್ಲಿ ಗೆಲುವು ಕಂಡಿತ್ತು.