ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ

Public TV
1 Min Read
pm narendra modi

ನವದೆಹಲಿ: ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಗೆದ್ದ 16 ವರ್ಷದ ಆರ್ ಪ್ರಜ್ಞಾನಂದನನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಯುವ ಪ್ರತಿಭೆ ಆರ್ ಪ್ರಜ್ಞಾನಂದ ಅವರ ಯಶಸ್ಸಿನ ಬಗ್ಗೆ ನಾವೆಲ್ಲರೂ ಸಂತೋಷಪಡುತ್ತಿದ್ದೇವೆ. ಹೆಸರಾಂತ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಜಯಗಳಿಸಿದ ಅವರ ಸಾಧನೆಯ ಬಗ್ಗೆ ಹೆಮ್ಮೆಯಿದೆ. ಪ್ರತಿಭಾವಂತ ಪ್ರಜ್ಞಾನಂದ ಅವರ ಭವಿಷ್ಯದ ಪ್ರಯತ್ನಗಳಿಗೆ ನಾನು ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ವಿಶ್ವದ ನಂ.1 ಚೆಸ್ ಆಟಗಾರನಿಗೆ ಶಾಕ್ ಕೊಟ್ಟ 16ರ ಭಾರತೀಯ ಬಾಲಕ

16 ವರ್ಷ ವಯಸ್ಸಿನ ಭಾರತೀಯ ಗ್ರ್ಯಾಂಡ್‍ಮಾಸ್ಟರ್ ಆರ್ ಪ್ರಜ್ಞಾನಂದ ಅವರು ಆನ್‍ಲೈನ್ ಮೂಲಕ ನಡೆಯುತ್ತಿರುವ ಚೆಸ್ ರ್ಯಾಪಿಡ್ ಪಂದ್ಯಾವಳಿಯ ಏರ್‍ಥಿಂಗ್ಸ್ ಮಾಸ್ಟರ್ಸ್‍ನಲ್ಲಿ ನಾಕೌಟ್‍ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರು ಅಂಕಪಟ್ಟಿಯಲ್ಲಿ 11 ನೇ ಸ್ಥಾನದಲ್ಲಿದ್ದು, ರೌಂಡ್-ರಾಬಿನ್ ಹಂತದಿಂದ ಕೇವಲ ಎಂಟು ಮಂದಿ ಮಾತ್ರ ನಾಕೌಟ್‍ಗೆ ಅರ್ಹತೆ ಪಡೆದಿದ್ದಾರೆ. ಇದನ್ನೂ ಓದಿ: ಆರ್​ಸಿಬಿಯಲ್ಲಿ K.G.F ಸ್ಟಾರ್ಸ್

ಕಾರ್ಲಸೆನ್‍ರ ಸತತ ಮೂರು ಗೆಲುವಿನ ಓಟವನ್ನು ನಿಲ್ಲಿಸಲು ಸೋಮವಾರದ ಆರಂಭದಲ್ಲಿ ನಡೆದ ಟಾರ್ರಾಸ್ಚ್ ವಿಭಾಗದ 8ನೇ ಸುತ್ತಿನ ಆಟದಲ್ಲಿ ಪ್ರಜ್ಞಾನಂದ ಅವರು 39 ನಡೆಗಳಲ್ಲಿ ಕಪ್ಪು ಕಾಯಿಗಳೊಂದಿಗೆ ಗೆದ್ದಿದ್ದರು.

pragnandhaa 2 1

ಪ್ರಜ್ಞಾನಂದ ಅವರು ಪಂದ್ಯಾವಳಿಯ 10 ಮತ್ತು 12ರ ಸುತ್ತುಗಳಲ್ಲಿ ಆಂಡ್ರೆ ಎಸಿಪೆಂಕೊ ಮತ್ತು ಅಲೆಕ್ಸಾಂಡ್ರಾ ಕೊಸ್ಟೆನಿಯುಕ್ ವಿರುದ್ಧ ಇನ್ನೂ ಎರಡು ವಿಜಯಗಳನ್ನು ದಾಖಲಿಸಿದರು. ಆದರೆ ಮಂಗಳವಾರ ಅವರು ನೋಡಿರ್ಬೆಕ್ ಅಬ್ದುಸತ್ತೊರೊವ್ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *