– ವರ್ಚುವಲ್ ಆಗಿ ಧಾರವಾಡ-ಬೆಂಗಳೂರು ರೈಲಿಗೂ ಚಾಲನೆ
ಭೋಪಾಲ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ದೇಶಾದ್ಯಂತ 5 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ (Vande Bharat Express Train) ಒಂದೇ ಸಮಯದಲ್ಲಿ ಹಸಿರು ನಿಶಾನೆ ತೋರಿದ್ದಾರೆ.
Advertisement
ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಮೋದಿ ಬೆಳಗ್ಗೆ 11 ಗಂಟೆಗೆ ಹೊಸ 5 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ರಾಣಿ ಕಮಲಾಪತಿ-ಜಬಲ್‌ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಗೂ ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ ಎಂಬ 5 ರೈಲುಗಳಿಗೆ ಮೋದಿ ಚಾಲನೆ ನೀಡಿದ್ದಾರೆ.
Advertisement
Advertisement
ಈ ರೈಲುಗಳು ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಗೋವಾ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಪ್ರಧಾನಿ ಮೋದಿ ಸೋಮವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್; ಮಕ್ಕಳ ಶೂ, ಸಾಕ್ಸ್ ಖರೀದಿ ಹಣಕ್ಕೂ ಕಾಂಗ್ರೆಸ್ ಸರ್ಕಾರ ಕತ್ತರಿ
Advertisement
PM Shri @narendramodi flags off Vande Bharat trains from Rani Kamalapati Station in Bhopal, MP. https://t.co/NN1ulUsuJy
— BJP (@BJP4India) June 27, 2023
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ರಾಜ್ಯಪಾಲ ಮಂಗುಭಾಯ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೋದಿ ಇಂದು ಚಾಲನೆ ನೀಡಿರುವ 5 ರೈಲುಗಳು ಸೇರಿ 24 ವಂದೇ ಭಾರತ್ ರೈಲುಗಳು ದೇಶಾದ್ಯಂತ ಸಂಚರಿಸುತ್ತಿವೆ. ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್, ಕರ್ನಾಟಕಕ್ಕೆ 2ನೇ ವಂದೇ ಭಾರತ್ ರೈಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಭೂಮಿ ಕಂಪಿಸಿದ ಅನುಭವ – ಮನೆ ಸೇರಲು ಹೆದರುತ್ತಿರುವ ಜನ
ರಾಜ್ಯದ 2ನೇ ವಂದೇ ಭಾರತ್ ರೈಲಿಗೆ ಚಾಲನೆ:
ಧಾರವಾಡದ ರೈಲ್ವೆ ನಿಲ್ದಾಣದಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ, ಮೇಯರ್ ವೀಣಾ ಬರದ್ವಾಡ, ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ ಕಿಶೋರ್ ಸೇರಿ ಹಲವರು ಭಾಗಿಯಾಗಿದ್ದರು.