ನವದೆಹಲಿ: 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ (L.K Advani) ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಶುಭ ಹಾರೈಸಿದ್ದಾರೆ.
Greetings to Shri LK Advani Ji on his birthday. A statesman blessed with towering vision and intellect, Advani Ji’s life has been dedicated to strengthening India’s progress. He has always embodied the spirit of selfless duty and steadfast principles. His contributions have left…
— Narendra Modi (@narendramodi) November 8, 2025
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ. ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ
భారతదేశ రాజకీయాల్లో శిఖరాయమానులు, ఉక్కుమనిషి, వ్యక్తిగతంగా నాకు పితృసమానులు అయిన శ్రీ లాల్ కృష్ణ అద్వానీ గారి పుట్టినరోజు సందర్భంగా న్యూఢిల్లీలోని వారి నివాసానికి వెళ్ళి శుభాకాంక్షలు తెలియజేశాను.
శ్రీ అద్వానీ గారి దేశభక్తి, క్రమశిక్షణ, అంకితభావం, దృఢసంకల్పం యువతకు… pic.twitter.com/mzUADfDLFT
— M Venkaiah Naidu (@MVenkaiahNaidu) November 8, 2025
ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕೇತ್ರದಲ್ಲಿ ಅಳಿಸಲಾಗದ ಗುರುತನ್ನು ಉಳಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಪ್ರಧಾನಿಗಳು ಹಾರೈಸಿದ್ದಾರೆ.
ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು, ಅಡ್ವಾಣಿಯವರ ಮನೆಗೆ ತೆರಳಿ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ದೇಶಭಕ್ತಿ, ಶಿಸ್ತು, ಸಮರ್ಪಣೆ ಮತ್ತು ದೃಢಸಂಕಲ್ಪದ ವಿಷಯದಲ್ಲಿ ಅಡ್ವಾಣಿಯವರು ಯುವಕರಿಗೆ ಒಂದು ಮಾದರಿಯಾಗಿದ್ದಾರೆ. ದೇವರು ಅವರಿಗೆ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಬರೆದುಕೊಂಡಿದ್ದಾರೆ.


