INDIA ಮೈತ್ರಿಕೂಟ ನಮ್ಮ ನಂಬಿಕೆಗೆ ಧಕ್ಕೆ ತರುತ್ತಿದೆ: ಮೋದಿ

Public TV
1 Min Read
NARENDRA MODI

ತಿರುವನಂತಪುರಂ: ಪ್ರತಿಪಕ್ಷಗಳ INDIA ಒಕ್ಕೂಟವು ನಮ್ಮ ನಂಬಿಕೆಗಳಿಗೆ ಧಕ್ಕೆ ತರುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದರು.

ಕೇರಳದಲ್ಲಿ (Kerala) ನಡೆದ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂಡಿಯಾ (INDIA Alliance) ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ. ಅವರು ನಮ್ಮ ದೇವಸ್ಥಾನಗಳು ಮತ್ತು ಹಬ್ಬಗಳನ್ನು ಲೂಟಿಗೆ ದಾರಿಮಾಡಿಕೊಂಡಿದ್ದಾರೆ. ‘ತ್ರಿಶೂರ್ ಪೂರಂ’ನಲ್ಲಿ ನಡೆಯುತ್ತಿರುವ ರಾಜಕೀಯ ದುರದೃಷ್ಟಕರ. ಶಬರಿಮಲೆಯಲ್ಲಿ (Sabarimala) ನಡೆದಿರುವ ದುರಾಡಳಿತದಿಂದ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದು ಇಲ್ಲಿಯ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚೀತಾ ಆಶಾ

ಇಂದು ದೇಶದಲ್ಲಿ ದೊಡ್ಡ ದೊಡ್ಡ ರಸ್ತೆಗಳು ನಿರ್ಮಾಣವಾಗುತ್ತಿವೆ. ಆಧುನಿಕ ರೂಪದಲ್ಲಿ ವಿಮಾನ ನಿಲ್ದಾಣಗಳು ನಿರ್ಮಾಣವಾಗುತ್ತಿವೆ. ಆದರೆ ಮೋದಿಯವರನ್ನು ವಿರೋಧಿಸುತ್ತೇವೆ ಎಂಬ ಕಾರಣಕ್ಕೆ ಇಂಡಿಯಾ ಮೈತ್ರಿಕೂಟ ಸರ್ಕಾರ ಇಲ್ಲಿ ಯಾವುದೇ ಕೆಲಸ ನಡೆಯಲು ಬಿಡುತ್ತಿಲ್ಲ. ಲೂಟಿಗೆ ಕೇರಳದಲ್ಲಿ ಸಂಪೂರ್ಣ ಸ್ವಾತಂತ್ರ್ಯ ಬೇಕು. ಕೇಂದ್ರ ಸರ್ಕಾರದಿಂದ ಬಡವರಿಗೆ ಮತ್ತು ಮೂಲಸೌಕರ್ಯಕ್ಕೆ ಸಿಗುತ್ತಿರುವ ಹಣದ ಬಗ್ಗೆ ಯಾರೂ ಪ್ರಶ್ನಿಸುವುದು ಅವರಿಗೆ ಇಷ್ಟವಿಲ್ಲ. ಈ ಮೂಲಕ ಕೇಂದ್ರದ ಯೋಜನೆಗಳಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಸ್ವಾತಂತ್ರ್ಯದ ನಂತರ, ಎಲ್‌ಡಿಎಫ್ ಮತ್ತು ಯುಡಿಎಫ್ ಸರ್ಕಾರಗಳು ‘ನಾರಿ ಶಕ್ತಿ’ಯನ್ನು ದುರ್ಬಲವೆಂದು ಪರಿಗಣಿಸಿದವು. ಅಲ್ಲದೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾನೂನನ್ನು ಅವರು ತಡೆಹಿಡಿದರು. ಆದರೆ ಮೋದಿ ನಿಮಗೆ ನಿಮ್ಮ ಹಕ್ಕುಗಳನ್ನು ನೀಡುವ ಭರವಸೆ ನೀಡಿದರು ಮತ್ತು ಅದನ್ನು ಈಡೇರಿಸಿದ್ದೇನೆ. ದೇಶದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿ ಸರ್ಕಾರ ಇರುವವರೆಗೂ ತ್ರಿವಳಿ ತಲಾಖ್ ನಿಂದಾಗಿ ಮುಸ್ಲಿಂ ಸಹೋದರಿಯರು ನರಳುತ್ತಿದ್ದರು. ಆದರೆ ಅದರಿಂದ ಮುಕ್ತಿ ನೀಡುವ ಭರವಸೆ ನೀಡಿ ಪ್ರಾಮಾಣಿಕವಾಗಿ ಈಡೇರಿಸಿರುವುದಾಗಿ ಅವರು ಹೇಳಿದರು.

Share This Article