ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮ ಮೂಲದ ದಂಪತಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ (77th Independence Day) ಭಾಗಿಯಾಗಲು ಆಹ್ವಾನ ನೀಡಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಜಿ.ಅಂಬಿಕಾ ಹಾಗೂ ಅವರ ಪತಿ ಜಿ.ಗಿರೀಶ ಅವರ ಸೇವೆಯನ್ನು ಆಧರಿಸಿ, ಆಗಸ್ಟ್ 15 ರಂದು ದೆಹಲಿಯಲ್ಲಿ ಜರುಗುವ ಸ್ವಾತಂತ್ರ್ಯೋತ್ಸವದಲ್ಲಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ ಈ ದಂಪತಿಗೆ ಭಾಗಿಯಾಗುವ ಅವಕಾಶ ದೊರೆತಿದೆ. ಇದನ್ನೂ ಓದಿ: NCERT ಪಠ್ಯಕ್ರಮ ನಿರ್ಧಾರ ಮಂಡಳಿಯಲ್ಲಿ ಸುಧಾಮೂರ್ತಿಗೆ ಸ್ಥಾನ
Advertisement
Advertisement
ನವದೆಹಲಿಯ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಕಚೇರಿಯಿಂದ ಈ ದಂಪತಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು, ಇಂತಹ ವಿಶಿಷ್ಟ ಅವಕಾಶವನ್ನು ದೇಶದ ಎಲ್ಲಾ ರಾಜ್ಯಗಳಿಂದ ನಿಗದಿತ ಸಂಖ್ಯೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದವರನ್ನು ಗುರುತಿಸಿ, ಅವರನ್ನು ತಮ್ಮೊಂದಿಗೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿಸುವ ವಿಶಿಷ್ಟವಾದ ಪರಿಕಲ್ಪನೆಯನ್ನು ಅನುಷ್ಠಾನಕ್ಕೆ ತಂದಿದ್ದಾರೆ.
Advertisement
Advertisement
ರಾಷ್ಟ್ರದ ಎಲ್ಲಾ ರಾಜ್ಯಗಳಿಂದ ಇಂತಿಷ್ಟು ಜನರನ್ನು ಗುರುತಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ ಒಟ್ಟು 128 ಸಾಧಕರನ್ನ ಗುರುತಿಸಿ, ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಅತಿಥಿಗಳನ್ನು ನೇರವಾಗಿ ಮೊಬೈಲ್ ಮೂಲಕ ಸಂಪರ್ಕಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅಂತೆಯೇ ಕೂಡ್ಲಿಗಿ ಪಟ್ಟಣದ ಜಿ.ಅಂಬಿಕಾ ಹಾಗೂ ಅವರ ಪತಿ ಜಿ.ಗಿರೀಶರನ್ನು ಪ್ರಧಾನ ಮಂತ್ರಿ ಸಚಿವಾಲಯದಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ದೂರವಾಣಿ ಮೂಲಕ ಆಹ್ವಾನಿಸಲಾಗಿದೆ. ಇದನ್ನೂ ಓದಿ: ರಾಜೀನಾಮೆ, ನಿವೃತ್ತಿಯಿಂದ ತೆರವಾಗುತ್ತಿರುವ ಶಿಕ್ಷಕರು-ಪದವೀಧರರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ
Web Stories