ಬಿಷ್ಕೆಕ್: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಬಿಷ್ಕೆಕ್‌ನಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ (Masoud Pezeshkian) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಈ ವರ್ಷದ ಆರಂಭದಲ್ಲಿ ಪಶ್ಚಿಮ ಏಷ್ಯಾದಲ್ಲಿ ವಿನಾಶಕಾರಿ ಯುದ್ಧ ಭುಗಿಲೆದ್ದ ನಂತರ ಉಭಯ ದೇಶಗಳ ನಾಯಕ ಮೊದಲ ಮುಖಾಮುಖಿ ಸಭೆ ಇದಾಗಿದೆ.
ಕಿರ್ಗಿಸ್ತಾನ್ ರಾಜಧಾನಿಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗೆ ಮುಂಚಿತವಾಗಿ ಈ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಪೆಜೆಶ್ಕಿಯಾನ್ ಅಧಿಕಾರ ವಹಿಸಿಕೊಂಡ ಬಳಿಕ, 2024ರ ಅಕ್ಟೋಬರ್‌ನಲ್ಲಿ ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಮಯದಲ್ಲಿ ಇಬ್ಬರು ನಾಯಕರು ಕೊನೆ ಬಾರಿಗೆ ಭೇಟಿಯಾಗಿದ್ದರು. ಇದನ್ನೂ ಓದಿ: ಭೀಕರ ಪ್ರಳಯದ ಸುಳಿಯಲ್ಲಿ ನೇಪಾಳ – 903 ಮಂದಿ ಬಲಿ, 4 ಸಾವಿರಕ್ಕೂ ಅಧಿಕ ಜನರು ಕಣ್ಮರೆ
ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲಿ ಇರಾನ್ ಮೇಲೆ ದಾಳಿ ಮಾಡಿದಾಗಿನಿಂದ ಅವರು ಹಲವಾರು ಬಾರಿ ಫೋನ್ ಮೂಲಕ ಮಾತನಾಡಿದ್ದಾರೆ. ಆ ಸಂಭಾಷಣೆಗಳು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ನಾಗರಿಕ ರಕ್ಷಣೆ, ಹಾರ್ಮುಜ್ ಜಲಸಂಧಿಯ ಮೂಲಕ ನೌಕಾಯಾನ ಸ್ವಾತಂತ್ರ್ಯ ಮತ್ತು ಭಾರತದ ಇಂಧನ ಭದ್ರತೆಯ ಮೇಲೆ ಕೇಂದ್ರೀಕರಿಸಿದ್ದವು.
SCO ತನ್ನ 25 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಸೋಮವಾರದ ಸಭೆ ನಡೆದಿದೆ. ಈಗ ಭಾರತ, ಇರಾನ್, ರಷ್ಯಾ, ಚೀನಾ ಮತ್ತು ಪಾಕಿಸ್ತಾನವನ್ನು ಒಳಗೊಂಡಿರುವ ಈ ಗುಂಪು, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೇರಿದಂತೆ ನಾಯಕರನ್ನು ಒಟ್ಟುಗೂಡಿಸುತ್ತಿದೆ. ಕಿರ್ಗಿಸ್ತಾನ್ ಅಧ್ಯಕ್ಷ ಸದಿರ್ ಜಪರೋವ್ ಎರಡು ದಿನಗಳ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಇದನ್ನೂ ಓದಿ: ಇರಾನ್‌ನ ಲಾರಕ್ ದ್ವೀಪದ ಮೇಲೆ ಅಮೆರಿಕ ದಾಳಿ
