ನವದೆಹಲಿ: ಆಂಧ್ರಪ್ರದೇಶದ ಹಣಕಾಸು ಸಚಿವ ಹಾಗೂ ತೆಲಗುಂ ದೇಶಂ ಪಕ್ಷದ (ಟಿಡಿಪಿ) ಮುಖಂಡ ಯನಮಲ ರಾಮ ಕೃಷ್ಣುಡು ಅವರು, ಪ್ರಧಾನಿ ನರೇಂದ್ರ ಮೋದಿ ‘ಅನಕೊಂಡ’ ಇದ್ದಂತೆ ಎಂದು ಹೇಳಿಕಿ ನೀಡಿ, ಭಾರೀ ವಿವಾದಕ್ಕೆ ಗುರಿಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಿಬಿಐ, ಆರ್‍ಬಿಐ ಸೇರಿದಂತೆ ವಿವಿಧ ರಾಷ್ಟ್ರೀಯ ಸಂಸ್ಥೆಗಳನ್ನು ನುಂಗುತ್ತಿದ್ದಾರೆ. ಇಂತಹ ಧೋರಣೆ ಹೊಂದಿರುವ ಅವರು ಹೇಗೆ ಸಂರಕ್ಷಕರಾಗಲು ಸಾಧ್ಯ ಎಂದು ಸಚಿವರು ಪ್ರಶ್ನಿಸಿದ್ದಾರೆ.
Advertisement
ಅಷ್ಟೇ ಅಲ್ಲದೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎಲ್ಲರೂ ಟಾಮ್, ಡಿಕ್ ಮತ್ತು ಹ್ಯಾರಿ ಹಾಗೆ ಆಡುತ್ತಿದ್ದಾರೆ. ಹಿಂದೆ ಆಗಿ ಹೋಗಿರುವ ಬಗ್ಗೆ ಮಾತನಾಡುತ್ತಿದ್ದಾರೆ. ಆಗಿರುವುದು ಈಗ ಮತ್ತು ಭವಿಷ್ಯದಲ್ಲಿ ಬರುವುದಿಲ್ಲ ಎಂದ ಅವರು, ಕಾಂಗ್ರೆಸ್ ಮತ್ತು ಜನಸೇನಾ ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾರೆಯೇ ಹೊರತು ದೇಶದ ಬಗ್ಗೆ ಯಾವುದೇ ಹೊಣೆಗಾರಿಕೆ ಅವರಿಗಿಲ್ಲ ಎಂದು ಕುಟುಕಿದ್ದಾರೆ.
Advertisement
Advertisement
ಸಚಿವರ ಹೇಳಿಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಕನ್ನ ಲಕ್ಷ್ಮೀನಾರಾಯಣ ಅವರು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭ್ರಷ್ಟಾಚಾರದ ರಾಜ ಎಂದಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv