ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ (Balarama Elephant) ಭಾನುವಾರ ಸಾವಿಗೀಡಾಯಿತು. ದಸರಾ ಆನೆ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.
ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ. pic.twitter.com/lUfqXE0WR6
— Narendra Modi (@narendramodi) May 8, 2023
“ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ” ಎಂದು ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಬಲರಾಮ ಆನೆ (67) ಭಾನುವಾರ ಸಾವನ್ನಪ್ಪಿತು. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿತ್ತು. ಇದರಿಂದ ಆನೆ ಆಹಾರ, ನೀರು ಸೇವಿಸಲು ಆಗದಂತಹ ಸ್ಥಿತಿ ಉಂಟಾಗಿತ್ತು. ಪರಿಣಾಮವಾಗಿ ಬಲರಾಮ ಆನೆ ನಿತ್ರಾಣಗೊಂಡಿತ್ತು. ಆನೆಗೆ ಶಿಬಿರದಲ್ಲೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನೆ ಮೃತಪಟ್ಟಿತು.
ಬಲರಾಮ ಆನೆ ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಬರೋಬ್ಬರಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಖ್ಯಾತಿ ಗಳಿಸಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಎಂದು ಗಮನ ಸೆಳೆದಿತ್ತು. ಬಲರಾಮ ಆನೆ ಮೇಲೆ ಜನರಲ್ಲಿ ವಿಶೇಷ ಪ್ರೀತಿ ಇತ್ತು. ಇದನ್ನೂ ಓದಿ: ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದ ಮೋದಿ