ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ಮೋದಿ

Public TV
1 Min Read
narendra modi tribute to manmohan singh

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ (Manmohan Singh) ಅವರ ದೆಹಲಿಯ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಂತಿಮ ನಮನ ಸಲ್ಲಿಸಿದ್ದಾರೆ.

ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ‌ಭಾರತವನ್ನೇ ಬದಲಿಸಿತು ಆ ಒಂದು ಫೋನ್‌ ಕಾಲ್‌

pm modi manmohan singh family

ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ನಿವಾಸದಲ್ಲಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕೂಡ ಹಾಜರಿದ್ದರು.

92 ವಯಸ್ಸಿನ ಮನಮೋಹನ್‌ ಸಿಂಗ್‌ ಅವರು ಗುರುವಾರ ರಾತ್ರಿ 9:15ರ ಹೊತ್ತಿಗೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಸಿಂಗ್‌ ಅವರಿಗೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ತಾಯಿ ನಿಧನ – ಪ್ರಾಧ್ಯಾಪಕರಾಗಿ ಪಾಠ

ಸಿಂಗ್‌ ಅವರಿಗೆ ಪತ್ನಿ ಗುರುಶರಣ್ ಕೌರ್ ಕೊಹ್ಲಿ ಮತ್ತು ಉಪಿಂದರ್ ಸಿಂಗ್, ಅಮೃತ್ ಸಿಂಗ್, ದಮನ್ ಸಿಂಗ್ ಎಂಬ ಮೂವರು ಮಕ್ಕಳನ್ನು ಅಗಲಿದ್ದಾರೆ.

Share This Article