ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ – ವಿಶೇಷತೆ ಏನು?

Public TV
2 Min Read
NarendraModi Kempegowda Airport Terminal 2 2

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ(Narendra Modi) ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ  (Kempegowda International Airport) ನಿರ್ಮಾಣವಾಗಿರು ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಲೋಕಾರ್ಪಣೆ ಮಾಡಿದ್ದಾರೆ.

ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಹೊಂದಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರ್ಷಕ್ಕೆ ಲಕ್ಷಾಂತರ ಜನ ಪ್ರಯಾಣಿಸುತ್ತಾರೆ. ಹಾಗಾಗಿ ವಿಮಾನ ನಿಲ್ದಾಣ ತನ್ನ ಸಾಮರ್ಥ್ಯ ಹೆಚ್ಚಿಸಲು ಮುಂದಾಗಿ ಇದೀಗ ಟರ್ಮಿನಲ್-2(Terminal 2) ಸಿದ್ಧಗೊಂಡಿದೆ.

NarendraModi Kempegowda Airport Terminal 2 1

ಟರ್ಮಿನಲ್ 2 ವನ್ನು ಗಾರ್ಡನ್ ಟರ್ಮಿನಲ್(Garden Terminal) ಎಂದು ಕರೆಯಲಾಗುತ್ತದೆ. ಏಕೆಂದರೆ ಇದು ದೊಡ್ಡ ಕೃತಕ ಒಳಾಂಗಣ ಉದ್ಯಾನವನ್ನು ಹೊಂದಿದೆ. ಬೆಂಗಳೂರನ್ನು ಭಾರತದ ʼಗಾರ್ಡನ್‌ ಸಿಟಿʼಎಂದು ಕರೆಯಲಾದ ಬಿರುದನ್ನು ಎತ್ತಿಹಿಡಿಯಲಿದೆ ಎಂದೇ ವ್ಯಾಖ್ಯಾನಿಸಲಾಗಿದೆ. ಪ್ರಯಾಣಿಕರಿಗೆ ಉದ್ಯಾನವನದ ಅನುಭವ ನೀಡಲು ಕೃತಕ ಮರಗಿಡಗಳು, ಹಕ್ಕಿಗಳ ಕಲರವ-ಚಿಲಿಪಿಲಿ ನಾದವನ್ನು ಇಲ್ಲಿ ಕೇಳಬಹುದು.

Kempegowda International Airport Bengaluru 3

ಹೊಸದಾಗಿ ಟರ್ಮಿನಲ್ 2 (Bengaluru Terminal 2) ಎರಡನೇ ರನ್‌ ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಲಿವೆ. ಏರ್‌ಪೋರ್ಟ್‌ ಒಳಾಂಗಣವು ಸಂಪೂರ್ಣ ವುಡ್ ಡಿಸೈನ್, ಹಸಿರಿನೊಂದಿಗೆ ವಿನ್ಯಾಸಗೊಂಡಿದೆ. ಗ್ರೌಂಡ್ ಎಸಿ ಆಟೋ ಮೆಟಿಕ್ ಪಾಸ್‍ಪೋರ್ಟ್ ವೆರಿಫಿಕೇಷನ್, ಆಕರ್ಷಕ ಫ್ಲೋರಿಂಗ್ ಹಾಗೂ ಅತ್ಯಾಧುನಿಕ ಟೆಕ್ನಾಲಜಿಯನ್ನು ಹೊಂದಿದೆ.

PM Narendra Modi PM Modi inaugurates garden themed Terminal 2 of Kempegowda airport in Bengaluru 1

ವಿಮಾನ ಪ್ರಯಾಣಿಕರು ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ಸಂದರ್ಭದಲ್ಲಿ ವ್ಯಕ್ತಿಯನ್ನು ಗುರುತಿಸಲು ಫೇಸ್ ರೆಕಗ್ನಿಷನ್, ಫಿಂಗರ್ ಪ್ರಿಂಟ್ ಸೆನ್ಸಾರ್ ಸೌಲಭ್ಯ. ಕೆಐಎಎಲ್ ನೂತನ ಟರ್ಮಿನಲ್‍ನಲ್ಲಿ ವಿಮಾನ ನಿಲ್ದಾಣದಲ್ಲಿನ ಸೌಲಭ್ಯಗಳ ಬಗ್ಗೆ ಪ್ಯಾಸೆಂಜರ್‌ಗಳಿಗೆ ಮಾಹಿತಿ ಪಡೆಯಲು ಇನ್ ಬಿಲ್ಟ್ ಸ್ಮಾರ್ಟ್ ಫೋನ್ ಅಪ್ಲಿಕೇಷನ್ ತಂತ್ರಜ್ಞಾನ ರೂಪಿಸಲಾಗಿದೆ.

PM Narendra Modi PM Modi inaugurates garden themed Terminal 2 of Kempegowda airport in Bengaluru 3

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವನ್ನು ಕ್ಯಾಂಪಸ್‌ನಾದ್ಯಂತ ನವೀಕರಿಸಬಹುದಾದ ಶಕ್ತಿಯನ್ನು ಬಳಸಿಕೊಂಡು 100% ಸುಸ್ಥಿರತೆಯೊಂದಿಗೆ ರಚಿಸಲಾಗಿದೆ. ಇದನ್ನೂ ಓದಿ: ಮೋದಿಯಿಂದ ವಂದೇ ಭಾರತ್‌, ಕಾಶಿ ದರ್ಶನ್ ರೈಲಿಗೆ ಚಾಲನೆ

PM Narendra Modi PM Modi inaugurates garden themed Terminal 2 of Kempegowda airport in Bengaluru 2

ಅಮೆರಿಕದ ವಾಸ್ತುಶಿಲ್ಪ ಸಂಸ್ಥೆ ಸ್ಕಿಡ್‌ಮೋರ್, ಓವಿಂಗ್ಸ್ & ಮೆರಿಲ್ (SOM) ಕಂಪನಿ ಟರ್ಮಿನಲ್‌ ವಿನ್ಯಾಸ ಮಾಡಿದೆ. ಏಕಕಾಲದಲ್ಲಿ 6 ಸಾವಿರ ಮಂದಿಗೆ ಕುಳಿತುಕೊಳ್ಳುವ ವ್ಯವಸ್ಥೆ ಇರವುದು ವಿಶೇಷ. ಹೊಸ ಟರ್ಮಿನಲ್‌ನ ಮೊದಲ ಹಂತವು ಒಂದು ವರ್ಷದಲ್ಲಿ 2.5 ಕೋಟಿ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ನಿರೀಕ್ಷೆಯಿದೆ. ವರದಿಗಳ ಪ್ರಕಾರ ಎರಡನೇ ಟರ್ಮಿನಲ್‌ನ ಮೊದಲ ಹಂತದ ನಿರ್ಮಾಣದ ಅಂದಾಜು ವೆಚ್ಚ 13,000 ಕೋಟಿ ರೂ. ಆಗಿದ್ದು ಈ ಟರ್ಮಿನಲ್ ಸರಿಸುಮಾರು 2.5 ಲಕ್ಷ ಚದರ ಮೀಟರ್‌ನ ಬಿಲ್ಟ್-ಅಪ್ ಪ್ರದೇಶವನ್ನು ಹೊಂದಿದೆ. ಎರಡನೇ ಹಂತದಲ್ಲಿ ಈ ಟರ್ಮಿನಲ್‌ಗೆ ಇನ್ನೂ 4.41 ಲಕ್ಷ ಚ.ಮೀ ಹೊಸದಾಗಿ ಸೇರ್ಪಡೆಗೊಳ್ಳಲಿದೆ.

Live Tv
[brid partner=56869869 player=32851 video=960834 autoplay=true]

Share This Article