ಚಾಮರಾಜನಗರ: ವಿದ್ಯುತ್ ತಂತಿಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಕಾಡಾನೆಗೆ ಸೂಕ್ತ ಚಿಕಿತ್ಸೆ ನೀಡಿ ಉಪಚರಿಸಿದ್ದ ಬಂಡೀಪುರ (Bandipur) ಅರಣ್ಯ ಸಿಬ್ಬಂದಿ ಹಾಗೂ ವೈದ್ಯರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Happy to see this.
Compliments to the staff at Bandipur Tiger Reserve. Such compassion among our people is commendable. https://t.co/rcQIZdETNk
— Narendra Modi (@narendramodi) February 18, 2023
Advertisement
ಜಮೀನಿಗೆ ತಂತಿ ಬೇಲಿಗೆ ಅಕ್ರಮವಾಗಿ ಹಾಯಿಸಿದ್ದ ವಿದ್ಯುತ್ ತಗುಲಿ ಕಾಡಾನೆ ಅಸ್ವಸ್ಥಗೊಂಡಿದ್ದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಜಮೀನೊಂದರಲ್ಲಿ ನಡೆದಿತ್ತು. ಸತತ 10 ಗಂಟೆಗಳ ಕಾಲ ಚಿಕಿತ್ಸೆ ಬಳಿಕ ಆನೆ ಚೇತರಿಸಿಕೊಂಡಿತ್ತು. ಬಳಿಕ ಆನೆಯನ್ನು ಮತ್ತೆ ಕಾಡಿಗೆ ಬಿಡಲಾಗಿತ್ತು. ಇದನ್ನೂ ಓದಿ: ಬುದ್ಧ, ಅಂಬೇಡ್ಕರ್, ಸ್ವಾಮಿ ವಿವೇಕಾನಂದರ ಭಾವಚಿತ್ರದೊಂದಿಗೆ ಸೈಲೆಂಟ್ ಸುನಿ – ರಾರಾಜಿಸುತ್ತಿವೆ ಕಟೌಟ್
Advertisement
Advertisement
ಆನೆಗೆ ಚಿಕಿತ್ಸೆ ನೀಡಿ ಉಪಚರಿಸಿ ಕಾಡಿಗೆ ಬಿಟ್ಟಿದ್ದ ವೈದ್ಯರು ಹಾಗೂ ಬಂಡೀಪುರ ಅರಣ್ಯಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಸಿಂಗ್ ಟ್ವೀಟ್ ಮಾಡಿದ್ದರು. ಅರಣ್ಯ ಸಚಿವರ ಟ್ವೀಟ್‌ನ್ನು ರೀ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
ಇದನ್ನು ನೋಡಿ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಇರುವುದು ಶ್ಲಾಘನೀಯ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಅಕ್ರಮ ವಶದಲ್ಲಿರುವ ತೀರ್ಥಹಳ್ಳಿಯ ಸಾಫ್ಟ್‌ವೇರ್ ಇಂಜಿನಿಯರ್; ಬಿಡುಗಡೆಗೆ ಗೃಹ ಸಚಿವ ಶತಪ್ರಯತ್ನ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k