ಬೆಂಗಳೂರು: ನಾಳೆ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.
ಪಿಎಂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಆಗಿರಬೇಕು ಎಂದು ಪೊಲೀಸ್ ಇಲಾಖೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಅವರ ಆರ್.ಟಿ. ನಗರ ನಿವಾಸಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿ ಬಂದು ಮನೆಯಲ್ಲೇ ಕೋವಿಡ್ ಪರೀಕ್ಷೆ ಮಾಡಿದ್ದಾರೆ.
Advertisement
Advertisement
ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್ ಕಡ್ಡಾಯ ಹಿನ್ನೆಲೆ ಮೋದಿ ಕಾರ್ಯಕ್ರಮದ ಬಂದೋಬಸ್ತ್‌ನಲ್ಲಿ ಭಾಗಿಯಾಗಿರುವ 500 ಪೊಲೀಸರು ಕೋವಿಡ್ ಟೆಸ್ಟ್‌ಗೆ ಒಳಗಾಗಿದ್ದಾರೆ. ಬಿಬಿಎಂಪಿ ಆರೋಗ್ಯ ಸಿಬ್ಬಂದಿ ನಿನ್ನೆ ಪ್ಯಾಲೇಸ್ ಗ್ರೌಂಡ್‌ನಲ್ಲಿ ಪೊಲೀಸರನ್ನು ಕೋವಿಡ್ ಟೆಸ್ಟ್ ಮಾಡಿದ್ದು, ಇಂದು ರಿಪೋರ್ಟ್ ಹೊರಬೀಳಲಿದೆ. ಇದನ್ನೂ ಓದಿ: ಕೇವಲ 1 ಗಂಟೆಯಲ್ಲಿ 3,182 ಪುಷ್-ಅಪ್ ಮಾಡಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿದ ಭೂಪ!
Advertisement
Advertisement
8ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡುತ್ತಿದ್ದು, ಜೂನ್ 20 ಮತ್ತು 21ರಂದು ಎರಡು ದಿನ ಮೋದಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೂ. 20ರಂದು ಮಧ್ಯಾಹ್ನ 11.55ಕ್ಕೆ ಬೆಂಗಳೂರು ಯಲಹಂಕ ವಾಯುನೆಲೆಗೆ ಆಗಮಿಸಿ ನಂತರ ಮಧ್ಯಾಹ್ನ 12:30ಕ್ಕೆ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..