ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್: ವಿನೇಶ್‌ಗೆ ಸಮಾಧಾನ ಹೇಳಿದ ಮೋದಿ

Public TV
1 Min Read
PM Narendra Modi reacts to Vinesh Phogats disqualification

ನವದೆಹಲಿ: ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಸಮಾಧಾನ ಹೇಳಿದ್ದಾರೆ.

ಮಹಿಳೆಯರ 50 ಕೆಜಿ ಕುಸ್ತಿ ಫ್ರೀಸ್ಟೈಲ್ ವಿಭಾಗದ ಫೈನಲ್‌ ಸ್ಪರ್ಧೆಯಿಂದ ವಿನೇಶ್‌ ಫೋಗಟ್‌ ಅನರ್ಹತೆಗೊಂಡ ಬೆನ್ನಲ್ಲೇ ಮೋದಿ ಅವರು ಎಕ್ಸ್‌ನಲ್ಲಿ ಸಮಾಧಾನ ಹೇಳಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರ ಜೊತೆ ದೂರವಾಣಿ ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Paris Olympics| ಭಾರತಕ್ಕೆ ಆಘಾತ – ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ

ಮೋದಿ ಹೇಳಿದ್ದೇನು?
ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನೋವು ತಂದಿದೆ. ಪದಗಳು ನಾನು ಅನುಭವಿಸುತ್ತಿರುವ ಹತಾಶೆಯ ಅರ್ಥವನ್ನು ವ್ಯಕ್ತಪಡಿಸಬಹುದು ಎಂದು ನಾನು ಬಯಸುತ್ತೇನೆ.

ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಮತ್ತೆ ಶಕ್ತಿಶಾಲಿಯಾಗಿ ಮರಳಿ ಬನ್ನಿ. ನಾವು ನಿಮ್ಮ ಜೊತೆ ಇದ್ದೇವೆ.

Share This Article